AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್​

ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿ ನಿಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿ ಜನವರಿ 20 ರಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರಾಜ ಭವನದವರೆಗೆ ಪ್ರತಿಭಟನಾ ಪ್ರತಿಭಟನೆ ನಡೆಸುವ ಜೊತೆಗೆ ರಾಜ ಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದರು.

ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್​
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
sandhya thejappa
sandhya thejappa| Edited By: |

Updated on:Jan 14, 2021 | 5:03 PM

Share

ಬೆಂಗಳೂರು: ಕೃಷಿ ಕಾಯ್ದೆಗಳ ವಿರುದ್ಧ ಇಡೀ ದೇಶದ ರೈತರು ವಿದೇಶಗಳು ನೋಡುವ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು, ರಾಜ್ಯದ ರೈತರಿಗೆ ಶಕ್ತಿ ತುಂಬಲು ಜನವರಿ 20 ರಂದು ಚಳವಳಿ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿ ನಿಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ ಜನವರಿ 20 ರಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರಾಜ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಜೊತೆಗೆ ರಾಜ ಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದರು.

ಕೊರೊನಾ ಹಾವಳಿಯಿಂದ ಇಡೀ ವರ್ಷ ಎಲ್ಲಾ ವ್ಯಾಪಾರಸ್ಥರಿಗೆ ತೀರಾ ನಷ್ಟವಾಗಿದೆ. ಈ ನಡುವೆ ಯಾರಿಗೂ ಸಹಾಯ ಆಗದ ರೀತಿಯಲ್ಲಿ ಸರ್ಕಾರ ನಡೆದುಕೊಂಡಿದೆ. ರೈತರು, ವರ್ತಕರ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ತೆರಿಗೆ ಹೆಚ್ಚಳ, ಗ್ಯಾಸ್ ಬೆಲೆ ಹೆಚ್ಚಳ, ವಿದ್ಯುತ್ ಬೆಲೆ ಹೆಚ್ಚಳ, ರೈತರಿಗೆ ಸಬ್ಸಿಡಿ, ಶಾಲೆ ಶುಲ್ಕ, ಸ್ಕಾಲರ್ಶಿಪ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೋರಾಟ ನಡೆಸುತ್ತೇವೆ ಎಂದರು.

ಕಾಂಗ್ರೆಸ್​ ತಯಾರು ಮಾಡಿದ ನಾಯಕರು ನಿಮಗೆ ಶಕ್ತಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪರವರು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಎಂದು ಅಭಿಪ್ರಾಯಪಟ್ಟ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದಿದ್ದಾರೆ. ಜೊತೆಗೆ ಅಧಿಕಾರ ಯಡಿಯೂರಪ್ಪರವರದ್ದಾಗಿರಬಹುದು ಆದರೆ ನಿಮಗೆ ಮಾತಾಡುವುದಕ್ಕೆ ಅವಕಾಶ ಕೊಟ್ಟಿರುವುದು ಕಾಂಗ್ರೆಸ್. ನಾವು ತಯಾರು ಮಾಡಿದ ನಾಯಕರು ನಿಮಗೆ ಶಕ್ತಿಯಾಗಿದ್ದಾರೆ. ತಲೆಯಲ್ಲಿ ಭ್ರಮೆ ಇದ್ದರೆ ಅದನ್ನು ತೆಗೆದುಹಾಕಿ. ಸಂಪುಟ ರಚನೆ ಬಗ್ಗೆ ನಿಮ್ಮ ಪಕ್ಷದವರೇ ಬ್ಲಾಕ್ ಮೇಲ್​ ಜನತಾ ಪಾರ್ಟಿ ಎಂದು ಹೇಳಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.

ದೇವರು ಇಲ್ಲ ಅನ್ನೋ ಜಾತಿಯಲ್ಲಿ ನಾನು ಹುಟ್ಟಿಲ್ಲ..ದೈವ ನಿರ್ಣಯಕ್ಕೆ ತಲೆಬಾಗುತ್ತೇನೆ ಎಂದ ಮುನಿರತ್ನ

Published On - 5:01 pm, Thu, 14 January 21

Follow Us
sandhya thejappa
sandhya thejappa
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್