AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಸಭೆ ಸದಸ್ಯೆ ಎಳೆದಾಟ ಪ್ರಕರಣ.. ಸರ್ಕಾರ ಯಾಕೆ ಮೌನವಹಿಸಿದೆ? ಡಿಕೆ ಶಿವಕುಮಾರ್ ಪ್ರಶ್ನೆ

ಈವರೆಗೂ ಪೊಲೀಸರು ಪ್ರಕರಣ ದಾಖಲಿಸಿ ಯಾರನ್ನೂ ಬಂಧಿಸಿಲ್ಲ. ಬಿಜೆಪಿಯವರು ದೌರ್ಜನ್ಯ ಎಸಗಿದ ತಮ್ಮ ಶಾಸಕನ ರಕ್ಷಣೆಗಾಗಿ ನಿಂತಿರುವುದು ನಾಚಿಕೆಗೇಡಿನ ವಿಚಾರ.

ಪುರಸಭೆ ಸದಸ್ಯೆ ಎಳೆದಾಟ ಪ್ರಕರಣ.. ಸರ್ಕಾರ ಯಾಕೆ ಮೌನವಹಿಸಿದೆ? ಡಿಕೆ ಶಿವಕುಮಾರ್ ಪ್ರಶ್ನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:40 PM

Share

ಬೆಂಗಳೂರು: ತೇರದಾಳದಲ್ಲಿ ಪುರಸಭೆ ಮಹಿಳಾ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯಮಂತ್ರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಲಿ, ಬಿಜೆಪಿ ಮಹಿಳಾ ಸಂಘಟನೆಗಳಾಗಲಿ ಮೌನ ವಹಿಸಿರುವುದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಲ್ಲ, ಯಾರನ್ನೂ ಬಂಧಿಸಿಲ್ಲ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, ಭ್ರೂಣ ಹತ್ಯೆ ಎಂದರೆ ಕೊಲೆಗೆ ಸಮ. ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ನಡೆದಿರುವುದು ಅಪರಾಧ ಎಂದಿದ್ದಾರೆ. ಮಹಾಭಾರತದಲ್ಲಿ ದುಶ್ಶಾಸನನ ದೌರ್ಜನ್ಯ ಕಣ್ಣೆದುರು ಕಂಡಂತೆ ಈ ಪ್ರಕರಣವನ್ನು ಮಾಧ್ಯಮಗಳು ತೋರಿಸಿವೆ. ಆದರೆ, ಈವರೆಗೂ ಪೊಲೀಸರು ಪ್ರಕರಣ ದಾಖಲಿಸಿ ಯಾರನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ, ಮಹಿಳಾ ಸಚಿವರು, ಶೋಭಾ ಕರಂದ್ಲಾಜೆ, ದೇಶದಲ್ಲಿರುವ ಮಹಿಳಾ ಸಂಘಟನೆಗಳು ಯಾರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಬಿಜೆಪಿಯವರು ದೌರ್ಜನ್ಯ ಎಸಗಿದ ತಮ್ಮ ಶಾಸಕನ ರಕ್ಷಣೆಗಾಗಿ ನಿಂತಿರುವುದು ನಾಚಿಕೆಗೇಡಿನ ವಿಚಾರ ಎಂದಿದ್ದಾರೆ. ಇದು ಕೇವಲ ದೇಶ ಮಟ್ಟದ ವಿಷಯವಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರಿಗೆ ಯಾವ ರೀತಿಯ ರಕ್ಷಣೆ? ಇದೇ ಪರಿಸ್ಥಿತಿ ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ಬಂದಿದ್ದರೆ? ಎಂದು ಮುಖ್ಯಮಂತ್ರಿ ಯಡಿಯೂರಪ್ಪರನ್ನು ಪ್ರಶ್ನಿಸಿದ ಡಿಕೆಶಿ, ಶೋಭಾ ಕರಂದ್ಲಾಜೆ ಹಾಗೂ ಶಶಿಕಲಾ ಜೊಲ್ಲೆಗೆ, ನಿಮಗೆ ಈ ರೀತಿ ಆಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಕೇಳಿದ್ದಾರೆ. ಈ ಸರ್ಕಾರದಲ್ಲಿ ಮಹಿಳೆಯರಿಗೆ ಯಾವ ರೀತಿಯ ರಕ್ಷಣೆ, ಗೌರವ ಸಿಗುತ್ತದೆ ಎಂಬುದು ಗೊತ್ತಾಗುತ್ತಿದೆ ಎಂದು ಛೇಡಿಸಿದ್ದಾರೆ.

ಸಂತ್ರಸ್ತರ ಪರ ನಿಲ್ಲುತ್ತೇವೆ ಎಂದ ಡಿಕೆಶಿ ಈ ವಿಚಾರವಾಗಿ ನಾನು, ನಮ್ಮ ವಿರೋಧ ಪಕ್ಷದ ನಾಯಕರು ಹಾಗೂ ಮಹಿಳಾ ಶಾಸಕರು ಇಂದು ತೇರದಾಳಕ್ಕೆ ಹೋಗಿ ಸಂತ್ರಸ್ತರ ಪರ ನಿಲ್ಲಲು ನಿರ್ಧರಿಸಿದ್ದೇವೆ. ಅಧಿವೇಶನದಲ್ಲೂ ಈ ವಿಚಾರವಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಹಾಲಿಂಗಪುರ ಪುರಸಭೆ ನೂಕಾಟ ಪ್ರಕರಣ: BJP ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ

Published On - 5:26 pm, Sat, 5 December 20

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?