Rohini Sindhuri: ರೋಹಿಣಿ ಸಿಂಧೂರಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದಿನೇಶ್​ ಕಲ್ಲಹಳ್ಳಿ ದೂರು

|

Updated on: Feb 20, 2023 | 12:25 PM

D Roopa IPS vs Rohini Sindhuri IAS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನ ನಂತರ ಅವರು ಲೋಕಾಯುಕ್ತರಿಗೂ ದೂರು ನೀಡಲಿದ್ದಾರೆ.

Rohini Sindhuri: ರೋಹಿಣಿ ಸಿಂಧೂರಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದಿನೇಶ್​ ಕಲ್ಲಹಳ್ಳಿ ದೂರು
ರೋಹಿಣಿ ಸಿಂಧೂರಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನ ನಂತರ ಅವರು ಲೋಕಾಯುಕ್ತರಿಗೂ ದೂರು ನೀಡಲಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ಧ ಹಿರಿಯ ಐಪಿಎಸ್​ ಅಧಿಕಾರಿಯಾದ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಅಧಿಕೃತ ಫೇಸ್​ಬುಕ್ ಖಾತೆಯಲ್ಲಿ ಬರೆದಿರುವ ಆರೋಪಗಳ ಬಗ್ಗೆ ಅಖಿಲ ಭಾರತ ಸೇವಾ (ನಡತೆ) ನಿಯಮಗಳು, 1962 ರ ನಿಯಮದ ಅಡಿಯಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸುತ್ತಿದ್ದೇನೆ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ದಿನೇಶ್​ ಕಲ್ಲಹಳ್ಳಿ ಉಲ್ಲೇಖಿಸಿದ್ದಾರೆ. ರೋಹಿಣಿ ವಿರುದ್ಧ ರೂಪ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರಗೆಳೆದು ಸಾರ್ವಜನಿಕರಿಗೆ ಅಧಿಕಾರಿಗಳ ಬಗ್ಗೆ ಇರುವ ನಂಬಿಕೆ-ಅಪನಂಬಿಕೆಗಳಿಗೆ ತೆರೆ ಎಳೆದು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಶಿಸ್ತು ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.

ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಅವರ ಸಂದೇಶಗಳ ಬಗ್ಗೆ ಉಲ್ಲೇಖವಿದ್ದು, ಅವರು ಎಂದಾದರೂ ಮಿತಿ ಮೀರಿದ್ದರೆ ತಕ್ಷಣವೇ ಅವರನ್ನು ಬ್ಲಾಕ್‌ ಮಾಡಬಹುದಿತ್ತು. ಕಾಯಂ ಆಗಿ ಆಗಿ ಬ್ಲಾಕ್‌ ಮಾಡಲಿಲ್ಲ. ಹಾಗೆ ಮಾಡದೇ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ ಎಂದು ಅವರು ಉಲ್ಲೇಖಿಸಿದ್ದಾರೆ. ಜತೆಗೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮಾಡಿರುವ ಇತರ ಆರೋಪಗಳನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: IAS Vs IPS | ಅಸಲಿಗೆ ನನ್ನ ಪತ್ನಿಯ ವಿಷಯದಲ್ಲಿ ಮಾತಾಡಲು ಡಿ ರೂಪಾ ಯಾರು? ಸುಧೀರ್ ರೆಡ್ಡಿ, ರೋಹಿಣಿ ಸಿಂಧೂರಿ ಪತಿ

ಈ ಮಧ್ಯೆ, ಈ ಇಬ್ಬರು ಅಧಿಕಾರಿಗಳ ಕಿತ್ತಾಟ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ ಎಂದಿರುವ ಬೊಮ್ಮಾಯಿ, ಇಬ್ಬರಿಗೂ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಇವರಿಬ್ಬರ ಕಿತ್ತಾಟದಿಂದ ಸರ್ಕಾರಕ್ಕೆ ಮುಜಗರ ಉಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಜವಾಬ್ದರಿಯಿಂದ ವರ್ತಿಸುವುದನ್ನು ಸಹಿಸಲ್ಲ. ಈ ಸಂಬಂಧ ಇಬ್ಬರಿಗೂ ನೊಟೀಸ್ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Mon, 20 February 23