ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ
‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.
ಬೆಂಗಳೂರು: ತಮ್ಮನ್ನು ಗೃಹ ಕಾರ್ಯದರ್ಶಿ ಹುದ್ದೆಯಿಂದ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿರುವುದಕ್ಕೆ ಐಪಿಎಸ್ ಅಧಿಕಾರಿ ಡಿ.ರೂಪಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಹೇಳಿದ್ದಾರೆ.
‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.
ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಆರಂಭವಾಗಿದ್ದ ವಿವಾದಕ್ಕೆ ಡಿ.ರೂಪಾ ಮತ್ತು ನಿಂಬಾಳ್ಕರ್ ಅವರನ್ನು ವರ್ಗಾಯಿಸುವ ಮೂಲಕ ಇತಿಶ್ರೀ ಹಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಯತ್ನಿಸಿತ್ತು.
ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ
Published On - 10:49 pm, Thu, 31 December 20