ರೂಪಾ ನಡೆ ಪ್ರಶ್ನಿಸುವವರು ಡಿಕೆ ರವಿ ಸಾವಿಗೆ ಸಂಬಂಧಿಸಿದ ಸಿಬಿಐ ವರದಿ ಓದಲಿ; ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ

ರವಿ ಸಾವಿನ ನೋವನ್ನು ಪತ್ನಿ ಕುಸುಮಾ ಹಾಗೂ ಅಂದಿನ ಸಿದ್ದರಾಮಯ್ಯ ಸರ್ಕಾರ ಅನುಭವಿಸಬೇಕಾಯಿತು ಎಂದು ಸೂರ್ಯ ಮುಕುಂದರಾಜ್​ ಉಲ್ಲೇಖಿಸಿದ್ದಾರೆ.

ರೂಪಾ ನಡೆ ಪ್ರಶ್ನಿಸುವವರು ಡಿಕೆ ರವಿ ಸಾವಿಗೆ ಸಂಬಂಧಿಸಿದ ಸಿಬಿಐ ವರದಿ ಓದಲಿ; ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ
ಡಿ ರೂಪಾ ಮೌದ್ಗೀಲ್, ಐಪಿಎಸ್

Updated on: Feb 21, 2023 | 7:57 AM

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ (D Roopa Moudgil) ನಡುವಣ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ಆ ಕುರಿತು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಮ, ವಕೀಲ ಸೂರ್ಯ ಮುಕುಂದರಾಜ್ ಪ್ರತಿಕ್ರಿಯಿಸಿದ್ದಾರೆ. ಡಿ ರೂಪಾ ಬೆಂಬಲಿಸಿರುವ ಅವರು ಐಎಎಸ್​ ಅಧಿಕಾರಿ ಡಿಕೆ ರವಿ ಸಾವಿಗೆ ಸಂಬಂಧಿಸಿದ ಸಿಬಿಐ ತನಿಖಾ ವರದಿಯ ಪ್ರತಿಯನ್ನು ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ, ರೂಪಾ ಅವರ ನಡೆಯನ್ನು ಪ್ರಶ್ನಿಸುವವರು ಸಿಬಿಐ ತನಿಖಾ ವರದಿಯನ್ನು ಓದಬೇಕು. ಡಿಕೆ ರವಿ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಸಿಬಿಐ ವರದಿಯಲ್ಲಿ ಉಲ್ಲೇಖವಿದೆ. ಅದನ್ನು ಓದಬೇಕು ಎಂದು ಹೇಳಿದ್ದಾರೆ. ರೋಹಿಣಿ ಸಿಂಧೂರಿ ಅದೃಷ್ಟ ಚೆನ್ನಾಗಿದ್ದುದರಿಂದ ಅಂದು ಅವರ ಮೇಲೆ ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಲಿಲ್ಲ. ರವಿ ಸಾವಿನ ನೋವನ್ನು ಪತ್ನಿ ಕುಸುಮಾ ಹಾಗೂ ಅಂದಿನ ಸಿದ್ದರಾಮಯ್ಯ ಸರ್ಕಾರ ಅನುಭವಿಸಬೇಕಾಯಿತು ಎಂದು ಸೂರ್ಯ ಮುಕುಂದರಾಜ್​ ಉಲ್ಲೇಖಿಸಿದ್ದಾರೆ.

ಡಿಕೆ ರವಿ ಸಾವಿಗೆ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ಸುಧೀರ್ ಕಾರಣ. ರೋಹಿಣಿ ಹಾಗೂ ಡಿಕೆ ರವಿಯವರ ಎಲ್ಲ ಸಂಭಾಷಣೆ ಸಿಬಿಐ ವರದಿಯಲ್ಲಿದೆ ಎಂದು ಸೂರ್ಯ ಮುಕುಂದರಾಜ್​ ಉಲ್ಲೇಖಿಸಿದ್ದಾರೆ. ಜತೆಗೆ, ಒಬ್ಬ ಅಧಿಕಾರಿಯ ಸಾವಿನ ನಂತರವೂ ಬದಲಾಗದ ಸಿಂಧೂರಿ ತನ್ನ ಚೆಲ್ಲಾಟವನ್ನು ಮುಂದುವರೆಸಿದ್ದಾರೆ. ಈಗ ರೂಪ ಅದಕ್ಕೆ ಅಂತ್ಯವಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಸೋಮವಾರ ಭೇಟಿಯಾಗಿದ್ದ ರೂಪಾ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದರು. ಈ ಮಧ್ಯೆ, ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಐಎಎಸ್-ಐಪಿಎಸ್ ಅಧಿಕಾರಿಗಳ ನಡುವಣ ಕಿತ್ತಾಟದ ಬಗ್ಗೆ ಚರ್ಚೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us