AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ

ಡಿ ಸುಧಾಕರ್ ನಿಧನ: ಸಚಿವ ಡಿ. ಸುಧಾಕರ್ ರಾಜಕೀಯ ಜೀವನ ಸುದೀರ್ಘವಾದದ್ದು. ಚಳ್ಳಕೆರೆಯಿಂದ ಆರಂಭವಾದ ಇವರ ಪಯಣ ಹಿರಿಯೂರು ಕ್ಷೇತ್ರದಲ್ಲಿ ಭದ್ರವಾಗಿ ನೆಲೆಯೂರಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸರ್ಕಾರಗಳ ಸಂಪುಟಗಳಲ್ಲಿ ಸಚಿವರಾಗಿ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಅಂತರಾಷ್ಟ್ರೀಯ ಮಟ್ಟದ ಉದ್ಯಮಿಯಾಗಿದ್ದರೂ ರೈತಪರ ಕೆಲಸಗಳಿಂದ ಇವರು ಜನಪ್ರಿಯರಾಗಿದ್ದರು.

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ
ಸಚಿವ ಡಿ. ಸುಧಾಕರ್Image Credit source: tv9
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 10, 2026 | 7:19 AM

Share

ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು, ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಿದ್ದರು.

ಮುಖ್ಯಾಂಶಗಳು

  • 2004ರಲ್ಲಿ ಚಳ್ಳಕೆರೆಯಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದ ಡಿ. ಸುಧಾಕರ್.
  • 2008ರಲ್ಲಿ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದಿದ್ದರು.
  • ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಜಿಲ್ಲೆಯ ಪ್ರಭಾವಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ರಾಜಕೀಯ ಪಯಣದ ಆರಂಭ ಮತ್ತು ಏಳಿಗೆ

1961ರಲ್ಲಿ ಜನಿಸಿದ ಡಿ. ಸುಧಾಕರ್, ಬಿ.ಕಾಂ ಪದವಿ ಮುಗಿಸಿ ತಂದೆಯವರ ಕೃಷಿ ಮತ್ತು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯದ ಪಟ್ಟುಗಳನ್ನು ಕಲಿತ ಇವರು, 2004ರಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಗೆಲುವು ಸಾಧಿಸಿದರು. ಕ್ಷೇತ್ರ ಮೀಸಲಾತಿ ಬದಲಾದಾಗ ಹಿರಿಯೂರಿಗೆ ಶಿಫ್ಟ್ ಆದ ಸುಧಾಕರ್, 2008ರಲ್ಲಿ ಅಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಅಚ್ಚರಿಯ ಜಯ ದಾಖಲಿಸಿದ್ದರು. ಅಂದು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಇವರು ಯಡಿಯೂರಪ್ಪ ಸಂಪುಟದಲ್ಲಿ ಸಮಾಜ ಕಲ್ಯಾಣ, ಮುಜರಾಯಿ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು.

ಕೋರ್ಟ್​ ಮೆಟ್ಟಿಲೇರಿ ಶಾಸಕ ಸ್ಥಾನ ಉಳಿಸಿಕೊಂಡಿದ್ದ ಸುಧಾಕರ್!

2010ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಎದ್ದ 16 ಶಾಸಕರಲ್ಲಿ ಸುಧಾಕರ್ ಕೂಡ ಒಬ್ಬರಾಗಿದ್ದರು. ಅಂದು ಸ್ಪೀಕರ್ ಅವರಿಂದ ಅನರ್ಹಗೊಂಡರೂ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಿ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಂಡ ಚತುರ ಇವರು. 2013ರಲ್ಲಿ ಮತ್ತೆ ಕಾಂಗ್ರೆಸ್ ಸೇರಿ ಹಿರಿಯೂರಿನಿಂದ ಗೆದ್ದರು. 2018ರಲ್ಲಿ ಸೋಲು ಕಂಡಿದ್ದರೂ ಛಲ ಬಿಡದ ಸುಧಾಕರ್, 2023ರ ಚುನಾವಣೆಯಲ್ಲಿ ಮತ್ತೆ ಭರ್ಜರಿ ಜಯ ಸಾಧಿಸಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಸಕ್ರಿಯರಾಗಿದ್ದರು.

ರೈತಪರ ನಿಲುವು ಮತ್ತು ಸರಳ ವ್ಯಕ್ತಿತ್ವ

ಸಚಿವ ಡಿ. ಸುಧಾಕರ್ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲ ಬಂದಾಗ ಹಿರಿಯೂರಿನ ಕೆರೆಗಳ ಸುತ್ತಮುತ್ತ ಸ್ವತಃ ಮೇವು ಬೆಳೆಸಿ ರೈತರ ಜಾನುವಾರುಗಳಿಗೆ ಹಂಚಿದ ಅವರ ಕಾರ್ಯ ಇಂದಿಗೂ ಜನರ ಮನಸ್ಸಿನಲ್ಲಿದೆ. ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿರುವ ಸುಧಾಕರ್ ಅವರ ರಾಜಕೀಯ ಚತುರತೆ ಮತ್ತು ಜನಸೇವೆ ಜಿಲ್ಲೆಯ ಇತಿಹಾಸದಲ್ಲಿ ಸದಾ ನೆನಪಿನಲ್ಲುಳಿಯಲಿದೆ.

ಇದನ್ನೂ ಓದಿ: ಸಚಿವ ಡಿ. ಸುಧಾಕರ್ ನಿಧನ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ