AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಲಾಕ್​ಡೌನ್ ಭೀತಿ​: ವದಂತಿಗೆ ಬೆದರಿ ಗುಳೆ ಹೊರಟ ಕೂಲಿ ಕಾರ್ಮಿಕರು

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವುದರಿಂದ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ. ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರವೂ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಬಿಗಡಾಯಿಸಿದರೆ ಲಾಕ್​ಡೌನ್ ಆಗುವುದು ಖಚಿತ ಎಂಬ ವದಂತಿ ಹಬ್ಬಿದೆ.

ಕರ್ನಾಟಕದಲ್ಲಿ ಲಾಕ್​ಡೌನ್ ಭೀತಿ​: ವದಂತಿಗೆ ಬೆದರಿ ಗುಳೆ ಹೊರಟ ಕೂಲಿ ಕಾರ್ಮಿಕರು
ಗುಳೆ ಹೊರಟ ಮಂದಿ (ಸಂಗ್ರಹ ಚಿತ್ರ)
Skanda
| Updated By: ಸಾಧು ಶ್ರೀನಾಥ್​|

Updated on: Apr 08, 2021 | 9:50 AM

Share

ಬೆಂಗಳೂರು: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣ ಬಹುತೇಕ ಎಲ್ಲಾ ರಾಜ್ಯಗಳು ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿವೆ. ದೆಹಲಿ, ಪುಣೆ ಸೇರಿದಂತೆ ಅನೇಕ ಕಡೆಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ, ವಾರಾಂತ್ಯದ ಲಾಕ್​ಡೌನ್​ನಂತಹ ಕ್ರಮಗಳು ಜಾರಿಯಾಗಿವೆ. ಕರ್ನಾಟಕದಲ್ಲೂ ಇಂತಹದ್ದೇ ಕಠಿಣ ನಿಯಮಾವಳಿಗಳು ಜಾರಿಯಾಗಬಹುದು ಎಂಬ ವದಂತಿ ಹಬ್ಬಿದ್ದು, ಇದರಿಂದ ಭಯಭೀತರಾದ ಹೊರರಾಜ್ಯದ ಜನರು ಬೆಂಗಳೂರು ತೊರೆದು ತವರು ರಾಜ್ಯಗಳಿಗೆ ವಾಪಾಸ್ಸಾಗುತ್ತಿದ್ದಾರೆ.

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವುದರಿಂದ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ. ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರವೂ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಬಿಗಡಾಯಿಸಿದರೆ ಲಾಕ್​ಡೌನ್ ಆಗುವುದು ಖಚಿತ ಎಂಬ ವದಂತಿ ಹಬ್ಬಿದೆ. ಕಳೆದ ವರ್ಷದ ಲಾಕ್​ಡೌನ್​ ಸಂದರ್ಭದಲ್ಲಾಗಲೇ ಕಷ್ಟ ಅನುಭವಿಸಿರುವ ಜನರು ಈಗ ಮತ್ತೆ ಲಾಕ್​ಡೌನ್​ ಆಗಬಹುದೆಂದು ಹೆದರಿ ತಮ್ಮ ತವರಿಗೆ ಮರಳುತ್ತಿದ್ದಾರೆ.

ಉತ್ತರ ಪ್ರದೇಶ, ಒಡಿಶಾ, ರಾಜಸ್ಥಾನ, ಬಿಹಾರ, ಕೋಲ್ಕತ್ತಾ ರಾಜ್ಯಗಳಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಕೂಲಿ ಕಾರ್ಮಿಕರು ಸಿಕ್ಕ ಸಿಕ್ಕ ಬಸ್, ರೈಲುಗಳನ್ನೇರಿ ಹೊರಡುತ್ತಿದ್ದಾರೆ. ಈಗಾಗಲೇ ಉತ್ತರಪ್ರದೇಶ, ರಾಜಸ್ಥಾನ, ಕೊಲ್ಕತ್ತಾ ಭಾಗಕ್ಕೆ ಹೊರಡುವ ರೈಲುಗಳು ತುಂಬಿ ತುಳುಕಾಡುತ್ತಿದ್ದು, ಮತ್ತೆ ಲಾಕ್​ಡೌನ್ ಮಾಡುವ ಮೊದಲು ಊರು ಸೇರಿಕೊಳ್ಳುತ್ತೇವೆ ಎಂದು ಹೇಳುತ್ತಾ ಗುಳೆ ಹೊರಟಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯ ಲಾಕ್​ಡೌನ್ ಘೋಷಣೆ 

ಬಾಂಗ್ಲಾದೇಶದಲ್ಲಿ ಏಪ್ರಿಲ್ 1ರಿಂದ ಏಳು ದಿನಗಳ ಲಾಕ್​ಡೌನ್ ಘೋಷಣೆ

(Daily wage workers from outer states returning to their home due to the fear of Lockdown in Karnataka)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ