ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು, ಸುಳ್ಯದ ಹಲವೆಡೆ ಎನ್ಐಎ ದಾಳಿ
ಸುಳ್ಯ ತಾಲೂಕಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ಎನ್ಐಎ ಅಧಿಕಾರಿಗಳ ತಂಡ ಇದೀಗ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಮಂಗಳೂರು: ಸುಳ್ಯ ತಾಲೂಕಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ಎನ್ಐಎ ಅಧಿಕಾರಿಗಳ ತಂಡ ಇದೀಗ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡುತ್ತಿದ್ದಾರೆ.
ಸುಳ್ಯ ತಾಲೂಕಿನಲ್ಲಿ ಜುಲೈ 26 ರಂದು ನಡೆದ ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಇಡೀ ರಾಜ್ಯವೇ ದಂಗಾಗುವಂತೆ ಹಾಗೂ ಕರ್ನಾಟಕದ ಬಿಜೆಪಿ ಸರ್ಕಾರದ ಬುಡ ಅಲುಗಾಡಿಸಿತ್ತು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಕಾರ್ಯಕರ್ತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರದ ಕಠಿಣ ಕ್ರಮದ ಹೇಳಿಕೆಯನ್ನು ಟೀಕಿಸಿದರು, ಯುವ ಮೂರ್ಚಾದ ಮುಖಂಡರು ರಾಜೀನಾಮೆಯ ಬಿಸಿ ತಟ್ಟಿಸಿದ್ದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ