ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕಾರಣದಿಂದ ರಾಜೀನಾಮೆ ನೀಡಿರುವುದಾಗಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಸೆಂಥಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಸಿಕಾಂತ್ ಸೆಂಥಿಲ್ ಅವರು ಕಳೆದ ಒಂದು ವಾರದಿಂದ ರಜೆಯಲ್ಲಿದ್ದರು. ಶುಕ್ರವಾರ ಬೆಳಗ್ಗೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜೀನಾಮೆ ಮತ್ರ ಸಲ್ಲಿಸಿದ್ದಾರೆ. ಬಳಿಕ ಮತ್ತೊಂದು ಪತ್ರ ಬಿಡುಗಡೆ ಮಾಡಿ, ಪ್ರಜಾಪ್ರಭುತ್ವದ ಆಶಯಗಳಿಗೆ ಅಪಾಯ ಎದುರಾಗಿರುವುದೇ ರಾಜೀನಾಮೆಗೆ ಕಾರಣ ಎಂದಿದ್ದಾರೆ.
2017ರ ಅಕ್ಟೋಬರ್ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸೆಂಥಿಲ್, ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಸೇರಿದಂತೆ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದರು.