Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

Mangaluru News: ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ
ಕಡಲ ತೀರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on:Jul 12, 2023 | 9:47 AM

ಮಂಗಳೂರು: ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದೆ. ಇದೀಗ ಮಳೆ (Rain) ಅಬ್ಬರ ನಿಂತರೂ ಕಡಲ್ಕೊರೆತ (Sea Erosion) ನಿಂತಿಲ್ಲ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ‌ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 am, Wed, 12 July 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​