AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲಿಗೆ ಚಾಲನೆ ನೀಡಿದ ದಕ್ಷಿಣ ಕನ್ನಡ ಸಂಸದ ನಳಿನ್​ ಕುಮಾರ್​

ವಿಸ್ಟಾಡೋಮ್ ಕೋಚ್​ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿದ್ದು, ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯವನ್ನು ಪ್ರಾಯಾಣಿಕರು ಸವಿಯಬಹುದು.

ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲಿಗೆ ಚಾಲನೆ ನೀಡಿದ ದಕ್ಷಿಣ ಕನ್ನಡ ಸಂಸದ ನಳಿನ್​ ಕುಮಾರ್​
ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲಿಗೆ ಚಾಲನೆ
TV9 Web
| Edited By: |

Updated on: Jul 11, 2021 | 1:03 PM

Share

ದಕ್ಷಿಣ ಕನ್ನಡ: ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲಿಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ಸಂಸದ ನಳಿನ್‌ ಕುಮಾರ್ ಕಟೀಲು ಚಾಲನೆ ನೀಡಿದ್ದಾರೆ. ಮಂಗಳೂರು ಹಾಗೂ ಬೆಂಗಳೂರಿನ ನಡುವೆ ವಿಸ್ಟಾಡೋಮ್ ಕೋಚ್ ರೈಲು ಸಂಚರಿಸಲಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್‌ ಬೋಗಿ ಹೊಂದಿದ ರೈಲು ಇದಾಗಿದೆ. ಈ ರೈಲಿನಲ್ಲಿ ಹಗಲಿನ ವೇಳೆ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ಕೋಚ್ ಇದ್ದು, ಪ್ರಯಾಣದ ಸಂದರ್ಭದಲ್ಲಿ ಮನಸ್ಸಿಗೆ ಮುದ ನೀಡಲು ಇದು ಸಹಾಯಕವಾಗಿದೆ.

ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್​ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿದ್ದು, ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯವನ್ನು ಪ್ರಾಯಾಣಿಕರು ಸವಿಯಬಹುದು.

ಮೆಟ್ರೋದಲ್ಲಿ ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ ಕೊರೊನಾ ಲಾಕ್​ಡೌನ್​ ಸಡಿಲಗೊಂಡು ಅನ್​ಲಾಕ್​ 3.0 ಜಾರಿಯಾಗುತ್ತಿರುವ ಕಾರಣ, ನಮ್ಮ ಮೆಟ್ರೋ ಸಂಚಾರಕ್ಕೆ ವಾರಪೂರ್ತಿ ಅವಕಾಶ ಕಲ್ಪಿಸಲಾಗಿದೆ. ಎರಡನೇ ಅಲೆ ಕಾರಣದಿಂದ ವ್ಯತ್ಯಯಗೊಂಡು ನಿಗದಿತ ವೇಳೆಯಲ್ಲಿ ಆರಂಭಗೊಂಡಿದ್ದ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ಕಳೆದವಾರವಷ್ಟೇ ಕೊಂಚ ವಿಸ್ತರಿಸಲಾಗಿತ್ತು. ಅದನ್ನೀಗ ಮತ್ತೊಮ್ಮೆ ಸಡಿಲಿಸಲಾಗಿದ್ದು ವಾರದ ಏಳು ದಿನಗಳಲ್ಲೂ ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ. ಹಸಿರು, ನೇರಳೆ ಎರಡೂ ಮಾರ್ಗದಲ್ಲಿ ರಾತ್ರಿ 8ರವರೆಗೆ ಸೇವೆ ಒದಗಿಸುವುದಾಗಿ ಬಿಎಂಆರ್​ಸಿಎಲ್​ (BMRCL) ಮಾಹಿತಿ ನೀಡಿದೆ.

ಜುಲೈ 1 ರಿಂದ ನಮ್ಮ ಮೆಟ್ರೋ ಸೋಮವಾರದಿಂದ ಶುಕ್ರವಾರದವರೆಗೆ ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್​ ಕಳೆದ ವಾರ ತಿಳಿಸಿತ್ತು. ಆದರೆ, ಈಗ ಅನ್​ಲಾಕ್​ ಹಿನ್ನೆಲೆ ವಾರಾಂತ್ಯದಲ್ಲೂ ಅವಕಾಶ ಕಲ್ಪಿಸಲಾಗಿದ್ದು, ಶನಿವಾರ, ಭಾನುವಾರ ಸಹ ಇತರೆ ದಿನಗಳಂತೆಯೇ ಬೆಳಗ್ಗೆ 7ರಿಂದ ರಾತ್ರಿ 8 ಗಂಟೆವರೆಗೆ ಪ್ರಯಾಣಿಕರು ಮೆಟ್ರೋ ಅನುಕೂಲ ಪಡೆಯಬಹುದಾಗಿದೆ. ಜತೆಗೆ, ಜನದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೊಂದು ರೈಲು ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್ ಹೇಳಿರುವುದರಿಂದ ಮೆಟ್ರೋ ಪಯಣವನ್ನೇ ನೆಚ್ಚಿಕೊಂಡವರು ನಿರಾಳರಾಗಿದ್ದಾರೆ.

ಈ ಹಿಂದೆ ಮೊದಲ ಹಂತದ ಅನ್​ಲಾಕ್​ ಆಗುತ್ತಿದ್ದಂತೆ ಬೆಳಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ನಮ್ಮ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ನಂತರ ಆ ಅವಧಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ವಿಸ್ತರಿಸಲಾಗಿತ್ತು. ಇದೀಗ ವಾರದ ಎಲ್ಲಾ ದಿನಗಳಲ್ಲೂ ಬೆಳಗ್ಗೆ 7ರಿಂದ ರಾತ್ರಿ 8 ಗಂಟೆವರೆಗೆ ಅವಕಾಶ ನೀಡಲಾಗಿದೆ. ಜನದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೊಂದರಂತೆ ಸಂಚರಿಸಲಿರುವ ರೈಲು, ಉಳಿದ ಸಂದರ್ಭದಲ್ಲಿ 15 ನಿಮಿಷ ಅಂತರದಲ್ಲಿ ಓಡಾಡಲಿದೆ. ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದರೂ ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಕೊರೊನಾ ನಿಯಮಾವಳಿಗಳ ಪಾಲನೆಯಾಗುವಂತೆ ನೋಡಿಕೊಳ್ಳುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Namma Metro: ಇಂದಿನಿಂದ ಮೆಟ್ರೋದಲ್ಲಿ ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ; ಆದರೆ, ರೈಲು ಹತ್ತುವ ಮುನ್ನ ಈ ಅಂಶಗಳು ನೆನಪಿನಲ್ಲಿರಲಿ Viral Video: ರೈಲು ಹಳಿ ಮಧ್ಯೆ ಸಿಲುಕಿಕೊಂಡ ಸ್ಕೂಟರ್​; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ