ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!

| Updated By: ಗಂಗಾಧರ​ ಬ. ಸಾಬೋಜಿ

Updated on: May 19, 2024 | 8:44 PM

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧನ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ಧರಣಿ ಮಾಡಿ, ಪಿಎಸ್​ಐಗೆ ಧಮ್ಕಿ ಹಿನ್ನೆಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
Follow us on

ಮಂಗಳೂರು, ಮೇ 19: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ. ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ಶಾಸಕ ಹರೀಶ್ ಪೂಂಜಾ ಆಪ್ತರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಅಂತಾ PSI ಮುರಳೀಧರ್ ನಾಯ್ಕ್‌ಗೆ ಧಮ್ಕಿ ಕೂಡ ಹಾಕಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತ ಬಂಧನವಾಗುತ್ತಿದ್ದಂತೆ ಇತ್ತ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ, ಕಾರ್ಯಕರ್ತರು ಧರಣಿ ಮಾಡಿದ್ದಾರೆ. ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಬಂಧಿಸಿದ್ದೀರೆಂದು ಪಿಎಸ್‌ಐಗೆ ಧಮ್ಕಿ ಹಾಕಿದ್ದಾರೆ. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಕಲ್ಲು ಕ್ವಾರಿ ಮಾಲೀಕ ಪ್ರಮೋದ್ ದಿಡುಪೆ ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.