ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆ; ಇಂಟರ್​ನೆಟ್ ಸಂಪರ್ಕ​ ಸ್ಥಗಿತಕ್ಕೆ ಮನವಿ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರ ಶಾಂತಿ ಸಭೆಯ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಇಂಟರ್ನೆಟ್ ಸಂಪರ್ಕಕ್ಕೆ ಮನವಿ ಮಾಡಿದ್ದಾರೆ. ಇಂತಹ ಅನೇಕ ಅಭಿಪ್ರಾಯಗಳು ಶಾಂತಿಸಭೆಯಲ್ಲಿ ವ್ಯಕ್ತವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆ; ಇಂಟರ್​ನೆಟ್ ಸಂಪರ್ಕ​ ಸ್ಥಗಿತಕ್ಕೆ ಮನವಿ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು
ಶಾಂತಿ ಸಭೆ
Follow us
TV9 Web
| Updated By: Rakesh Nayak Manchi

Updated on:Jul 30, 2022 | 2:06 PM

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಜನಪ್ರತನಿಧಿಗಳು ಪ್ರಚೋಧನಕಾರಿ ಭಾಷಣ ನಿಲ್ಲಿಸುವಂತೆ ಹಾಗೂ ಮಾಧ್ಯಮಗಳಲ್ಲಿ ಕರಾವಳಿಯಲ್ಲಿ ಬೆಂಕಿ, ಕೊತಕೊತ ಎಂಬಿತ್ಯಾದಿ ರೀತಿಯಲ್ಲಿ ಸುದ್ದಿವಾಹಿನಿಗಳ ಡಿಬೇಟ್​ಗಳನ್ನು ನಡೆಸುವುದನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಪ್ರಚೋದನಕಾರಿ ಸಂದೇಶಗಳ ರವಾನೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮನವಿ ಮಾಡಿದ್ದಾರೆ.

ಶಾಂತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಇಲ್ಲದಿರುವುದನ್ನು ಗಮನಿಸಿದ ಮುಖಂಡರು ಅಸಮಧಾನ ವ್ಯಕ್ತಪಡಿಸಿದರು. ತಳಮಟ್ಟದ ಜನಪ್ರತಿನಿಧಿಗಳು ಇಲ್ಲ. ನಾವು ಹೋಗಿ ಊರಿನಲ್ಲಿ ಹೇಳಿದರೆ ಯಾರೂ ಕೇಳುವುದಿಲ್ಲ. ಜನಪ್ರತಿನಿಧಿಗಳು ಹೇಳಿದರೆ ಕೇಳುತ್ತಾರೆ. ಆದರೆ ಶಾಂತಿ ಸಭೆಯಲ್ಲಿ ಅವರೇ ಇಲ್ಲ. ಮೊದಲು ಅವರನ್ನು ಕರೆದು ಶಾಂತಿ ಸಭೆ ನಡೆಸಿ ಎಂದು ಸಭೆಯಲ್ಲಿ ನೆರೆದಿದ್ದವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸಿಎಎ ವಿಚಾರದಲ್ಲಿ ಗಲಭೆ ಆದಾಗ ತಕ್ಷಣ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಯಿತು, ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು. ಇದೇ ರೀತಿ ಈಗ ಕೂಡ ಮಾಡಬೇಕಿದೆ. ಪ್ರಚೋದಮಕಾರಿ ಸಂದೇಶಗಳು ರವಾನಿಸುವುದನ್ನು ತಡೆಯಲು ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಬಂದ್ ಮಾಡುವಂತೆ ಮಿಥುನ್ ರೈ ಮನವಿ ಮಾಡಿದರು.

ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು

ಶಾಂತಿ ಸಭೆಗೆ ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಿರುವುದು ಕಂಡುಬಂದಿವೆ. ಈ ಬಗ್ಗೆ ಬೊಟ್ಟು ಮಾಡಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೋ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಲು ಕಾರಣ ಮುಖ್ಯಮಂತ್ರಿಗಳ ತಾರತಮ್ಯ. ಕೇವಲ ಪ್ರವೀಣ್ ನೆಟ್ಟಾರು ಅವರ ಮನೆಗೆ ಮಾತ್ರ ಭೇಟಿ ನೀಡಿದ್ದಾರೆ. ಆದರೆ ಅಲ್ಲೇ ಸಮೀಪದ ಮಸೂದ್ ಮನೆಗೆ ಭೇಟಿ ನೀಡಲಿಲ್ಲ. ಪ್ರವೀಣ್ ಕುಟುಂಬಕ್ಕೆ ಮಾತ್ರ ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಮುಖ ಮುಸ್ಲಿಂ ಸಂಘಟನೆ ಭಾಗವಹಿಸಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ ಡ್ರಗ್ಸ್ ಮತ್ತು ಗಾಂಜಾ ಮಾಫೀಯಾ ನಿಲ್ಲಿಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ಮಂಗಳೂರು ಅಪರಾಧದ ಜಿಲ್ಲೆಯಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಹಾಳಾಗಿದೆ. ಎಲ್ಲಾ ಕಡೆ ಸೆಕ್ಷನ್ 144 ಹಾಕಿ ಜನರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ಜಾಗೃತರಾಗಿರಿ ಎಂದು ಪೊಲೀಸರನ್ನು ಎಚ್ಚರಿಸಿದ ವ್ಯಕ್ತಿ

ಶಾಂತಿ ಸಭೆಯಲ್ಲಿ ಭಾಗೀಯಾದ ಉಪ್ಪಿನಂಗಡಿ ವ್ಯಕ್ತಿಯೊಬ್ಬರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾಗ ಪೊಲೀಸರನ್ನು ಜಾಗೃತರಾಗಿರಿ ಎಂದು ಎಚ್ಚರಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಗಳೇ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಾತನಾಡಿ, ಕೊಲೆ ನಡೆದ ತಕ್ಷಣ ಅದರ ಕಾರಣದ ಬಗ್ಗೆ ಸುಳ್ಳು ಮಾಹಿತಿ ಹೋಗಿದೆ. ಫಾಝಿಲ್ ಕೊಲೆಯಲ್ಲಿ ಲವ್ ಇತ್ತು ಅಂತಾ ಕೆಲ ಮಾಧ್ಯಮಗಳು ಸುದ್ದಿ ಬಿತ್ತರ ಮಾಡಿತ್ತು. ಇಂತಹ ಸುಳ್ಳು ಸುದ್ದಿಗಳಿಂದ ಶಾಂತಿ ಭಂಗ ಆಗುತ್ತದೆ. ಈ ರೀತಿ ಸುದ್ದಿ ಮಾಡಿವವರ ಮೇಲೆ ಸುಮೋಟೊ ಕೇಸ್ ಹಾಕುವಂತೆ ಮನವಿ ಮಾಡಿದರು.

ಖಾಸಗಿ ಬಸ್​ಗಳ ಸಂಚಾರ ಸ್ಥಗಿತಕ್ಕೆ ಮನವಿ

ಮಂಗಳೂರಿನಲ್ಲಿ ಸೆಕ್ಷನ್ 144 ಜೊತೆಗೆ ಖಾಸಗಿ ಬಸ್ ಓಡಾಟ ನಿಲ್ಲಿಸಿದರೆ ಇಂತಹ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎಂದು ಮತ್ತೊಬ್ಬ ವ್ಯಕ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಾತನಾಡಿ, ನಾವು ಗಾಂಜಾ ಮಾರಾಟ ಆಗುತ್ತಿದೆ ಅಂತಾ ಮಾಹಿತಿ ಕೊಟ್ಟರೆ ಗಾಂಜಾ ಮಾರಾಟ ಮಡುವವನಿಗೆ ಈ ವಿಚಾರ ತಲುಪುತ್ತದೆ. ಹೀಗಿದ್ದಾಗ ನಾವು ಮಾಹಿತಿ ಕೊಡುಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಶಾಂತಿ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಹಿಂದೂ ಮತ್ತು ಮುಸ್ಲಿಂ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Published On - 2:06 pm, Sat, 30 July 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?