ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ: ಶೇಕಡಾ 97.91ರಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ಪರಿಷತ್ ಸ್ಥಾನ  ತೆರವಾಗಿತ್ತು. ಹೀಗಾಗಿ ಇಂದು ಉಪ ಚುನಾವಣೆ ನಡೆದಿದ್ದು, ಶೇಕಡಾ 97.91ರಷ್ಟು ಮತದಾನವಾಗಿದೆ. ಆ ಮೂಲಕ ಗೆಲುವು ಯಾರಿಗೆ ಎಂದು ಪ್ರಶ್ನೆ ಮೂಡಿದೆ.

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ: ಶೇಕಡಾ 97.91ರಷ್ಟು ಮತದಾನ
ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ: ಶೇಕಡಾ 97.91ರಷ್ಟು ಮತದಾನ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Oct 21, 2024 | 8:08 PM

ಮಂಗಳೂರು, ಅಕ್ಟೋಬರ್​ 21: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ಉಪ ಚುನಾವಣೆ (by-election) ನಡೆದಿದ್ದು,  ಶೇಕಡಾ 97.91ರಷ್ಟು ಮತದಾನ ಆಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ಗಂಟೆವರೆಗೆ ಮತದಾನ ನಡೆಯಿತು.  ಉಭಯ ಜಿಲ್ಲೆಗಳಲ್ಲಿ 392 ಮತಗಟ್ಟೆ ನಿರ್ಮಿಸಲಾಗಿದ್ದು, ಒಟ್ಟು 6,032 ಮತದಾರರನ್ನು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಹೊಂದಿದೆ.

ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ಪರಿಷತ್ ಸ್ಥಾನ  ತೆರವಾಗಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ -ಬಿ.ವೈ.ವಿಜಯೇಂದ್ರ

ಬಿಜೆಪಿಯಿಂದ ಬಿ.ಆರ್.ಕಿಶೋರ್, ಕಾಂಗ್ರೆಸ್​ನಿಂದ ರಾಜು ಪೂಜಾರಿ ಸ್ಪರ್ಧಿಸಿದ್ದರು. ಎಸ್​ಡಿಪಿಐನಿಂದ ಅನ್ವರ್ ಸಾದತ್, ಪಕ್ಷೇತರ ಸದಸ್ಯ ದಿನಕರ ಉಳ್ಳಾಲ ಸ್ಪರ್ಧಿಸಿದ್ದರು. ಅ.24ರಂದು ಮಂಗಳೂರಿನ ಸಂತ ಅಲೋಶಿಯಸ್​ ಪಿಯು ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರ ನಿಯೋಜನೆ ಮಾಡಲಾಗಿತ್ತು. ಮತಗಟ್ಟೆಗಳಿಗೆ ಭದ್ರತೆಗಾಗಿ 868 ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿತ್ತು. ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಕಲಂ 163ರಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

ಇನ್ನು ಮತದಾನ ಆರಂಭ ಬಳಿಕ ಮತಗಟ್ಟೆಗೆ ಭೇಟಿ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​, ಮತದಾನದ ಪ್ರಕ್ರಿಯೆಗಳನ್ನು ಪರಿಶೀಲನೆ ಮಾಡಿದ್ದಾರೆ. ಮತದಾನಕ್ಕೆ ಸಂಜೆ 4 ಗಂಟೆಯವರೆಗೆ ಅವಕಾಶವಿದ್ದ ಹಿನ್ನಲೆ ಸರತಿ ಸಾಲಿನಲ್ಲಿ ನಿಂತು ಶಾಸಕ ಡಾ.ವೈ.ಭರತ್ ಶೆಟ್ಟಿ, ಐವನ್ ಡಿಸೋಜಾ ಮತ್ತು ಮಂಜುನಾಥ್ ಭಂಡಾರಿ ಮತಪತ್ರದ ಮೂಲಕ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪ; ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು

ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಶಾಸಕರು, ಸಂಸದರು ಈ ಕ್ಷೇತ್ರದ ಮತದಾರರು ಕೂಡ ಮತ ಚಲಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ