ಕೋಟೆಕಾರು ಬ್ಯಾಂಕಿನಲ್ಲಿ 10ರಿಂದ 12 ಕೋಟಿ​ ದರೋಡೆ ಆಗಿದ್ಹೇಗೆ? ಖದೀಮರ ಪಕ್ಕಾ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಬೀದರ್​ನಲ್ಲಿ ಗುಂಡಿನ ದಾಳಿ ನಡೆಸಿ ಬರೋಬ್ಬರಿ 87 ಲಕ್ಷ ರೂ ಹಣವಿದ್ದ ಟ್ರಂಕ್ ಹೊತ್ತೊಯ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೋಟೆಕಾರು (Kotekar) ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ (Co Operative Bank) ಭಾರೀ ದರೋಡೆ ನಡೆದಿದೆ. ಬಂದೂಕು ತೋರಿಸಿ ಚಿನ್ನ, ನಗರದ ಸೇರಿದಂತೆ ಸುಮಾರು 10 ರಿಂದ 12 ಕೋಟಿ ರೂ. ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ದರೋಡೆಕೋರರ ಪ್ಲ್ಯಾನ್ ಹೇಗಿತ್ತು ನೊಡಿ

ಕೋಟೆಕಾರು ಬ್ಯಾಂಕಿನಲ್ಲಿ 10ರಿಂದ 12 ಕೋಟಿ​ ದರೋಡೆ ಆಗಿದ್ಹೇಗೆ? ಖದೀಮರ ಪಕ್ಕಾ ಪ್ಲ್ಯಾನ್ ಹೇಗಿತ್ತು ಗೊತ್ತಾ?
ಕೋಟೆಕಾರು ಬ್ಯಾಂಕ್​ ದರೋಡೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Jan 17, 2025 | 4:09 PM

ಮಂಗಳೂರು, (ಜನವರಿ 17): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್‌ ಶಾಕೆಯ  ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಆಗಂತುಕರು ಬ್ಯಾಂಕ್‌ಗೆ ನುಗ್ಗಿ ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ ಹಣ ಎಗರಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಇದೇ ಬ್ಯಾಂಕ್​ನಲ್ಲಿ ಈ ಹಿಂದೆಯೂ ಸಹ ಕಳ್ಳತನವಾಗಿತ್ತು.

ಪಕ್ಕಾ ಪ್ಲ್ಯಾನ್​ ಮಾಡಿಯೇ ದರೋಡೆ

ನಾಲ್ಕೈದು ಚೀಲದಲ್ಲಿ ಹಣ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಇನ್ನು ಸಿಸಿ ಕ್ಯಾಮರಾ ರಿಪೇರಿ ಮಾಡಲು ಬಂದವನ ಊಂಗುರವನ್ನು ಸಹ ದೋಚಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಪಕ್ಕಾ ಪ್ಲ್ಯಾನ್ ಮಾಡಿ ದರೋಡೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸರ ಹೆಚ್ಚಿನ ಭದ್ರತೆಯಲ್ಲಿದ್ದರು. ಹಾಗೇ ಇಂದು ಶುಕ್ರವಾರ ಆದ ಕಾರಣ ಮುಸ್ಲಿಮರು ನಮಾಜ್​ಗಾಗಿ ಮಧ್ಯಾಹ್ನ ಮಸೀದಿಗೆ ತೆರಳಿದ್ದಾರೆ. ಇನ್ನು ಬ್ಯಾಂಕ್ ಸಿಸಿ ಕ್ಯಾಮೆರಾ ಕೂಡ ಹಾಳಾಗಿದ್ದು, ಅದನ್ನು ಇಂದೇ ರಿಪೇರಿಗೆ ನೀಡಲಾಗಿತ್ತು.  ಸಿಸಿ ಕ್ಯಾಮರಾ ರಿಪೇರಿಗೆ ಮಾಡುವ ವೇಳೆ ಅದರ ವೈಯರ್ ಕಟ್​​ ಮಾಡಿದ ತಕ್ಷಣವೇ ಈ ಕೃತ್ಯ ಎಸಗಿದ್ದಾರೆ. ಇನ್ನು  ಇಡೀ ರಸ್ತೆಯ ಉದ್ದಕೂ ಒಂದೇ ಒಂದು ಸಿಸಿಟಿವಿ ಇಲ್ಲ. CCTV ಇಲ್ಲದನ್ನು ಗಮನಿಸಿಯೇ ಬ್ಯಾಂಕ್​​ ದರೋಡೆ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

ಈ ಹಿಂದೆಯೂ ಇದೇ ಬ್ಯಾಂಕ್​ನಲ್ಲಿ ದರೋಡೆಯಾಗಿತ್ತು

ಐದು ವರ್ಷಗಳ ಹಿಂದೆಯೇ ಇದೇ ಬ್ಯಾಂಕ್ ಕಳ್ಳತನವಾಗಿತ್ತು. ಗನ್,ತಲ್ವಾರ್, ಚಾಕು ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ಮಾದರಿಯಲ್ಲಿ  ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಲಾಗಿದೆ. ಇನ್ನು  ದರೋಡೆಕೋರರ ಪತ್ತೆ ಪೊಲೀಸರು ಎರಡು ತಂಡಗಳ ರಚನೆ ಮಾಡಲಾಗಿದೆ. ಇನ್ನು ಬ್ಯಾಂಕಿಗೆ ಒಬ್ಬ ಸೆಕ್ಯೂರಿಟಿ ಕೂಡ ಇಲ್ಲ. ಇನ್ನು ಸ್ಥಳೀಯರು ಬ್ಯಾಂಕ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಗರಂ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರು ಜಿಲ್ಲಾ ಪ್ರವಾಸ ಇರುವಾಗಲೇ ಈ ಕೃತ್ಯ ನಡೆದಿದೆ. ಹೀಗಾಗಿ ಈ ಬಗ್ಗೆ ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ದರೋಡೆಕೋರರು ತಪ್ಪಿಸಿಕೊಂಡಿದ್ದಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳ ಮೇಲೆ ಗಂರ ಆಗಿದ್ದಾರೆ. ಅಲ್ಲದೇ ಎಲ್ಲಾ ಟೋಲ್‌, ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Published On - 3:58 pm, Fri, 17 January 25

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ