AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

Mangaluru News: ಮಂಗಳೂರು ನಗರದಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ದಾಳಿ ನಡೆಸಿದ ಪೊಲೀಸರು, ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಮಂಗಳೂರಿನಲ್ಲಿ ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ
11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನImage Credit source: Mangalore Police
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 14, 2026 | 10:13 AM

Share

ಮುಖ್ಯಾಂಶಗಳು

  • ಉರ್ವಾದಲ್ಲಿ 11 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ಬಂಧನ
  • ಪಶ್ಚಿಮ ಬಂಗಾಳದಿಂದ ಬಂದು ಕೂಲಿ ಮಾಡಿಕೊಂಡಿದ್ದವರು
  • ಒಬ್ಬ ಏಜೆಂಟ್ ವಿರುದ್ಧವೂ ಎಫ್ಐಆರ್

ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada)  ಮಂಗಳೂರು (Mangaluru) ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ.

ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂರ್ ಅಮೀನ್, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಜಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ನಕಲಿ ವಿಳಾಸದಲ್ಲಿ ಬಂದವರು

ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಂಧಿತರಿಂದ ಬಾಂಗ್ಲಾ ಗುರುತಿನ ಚೀಟಿ ವಶ

ಕಾರ್ಯಾಚರಣೆಯ ವೇಳೆ ಬಂಧಿತರ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳ ಆಧಾರದ ಮೇಲೆ ಅವರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸುರತ್ಕಲ್​ನಲ್ಲಿ 11 ಮಂದಿಯ ಬಂಧಿಸಿದ್ದ ಪೊಲೀಸರು

ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಉರ್ವಾದಲ್ಲಿ 11 ಮಂದಿಯನ್ನು ಬಂಧಿಸಿರುವುದರಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ತೆಯಾದ ಅಕ್ರಮ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು: ಮಂಗಳೂರಲ್ಲಿ 6 ಮಂದಿ ವಶಕ್ಕೆ; ಮಂಡ್ಯಕ್ಕೂ ಎಂಟ್ರಿ ಕೊಟ್ರಾ ಬಾಂಗ್ಲಾ ಪ್ರಜೆಗಳು?

ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ರಮ ವಲಸೆ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆ ಕೂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾಂಗ್ಲಾದೇಶೀಯರನ್ನು ಕರೆತಂದ ಮೂವರ ವಿರುದ್ಧ ಕೇಸ್

ಮಂಗಳೂರಿಗೆ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸುಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಮಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕೆಲಸಕ್ಕಾಗಿ ಕರೆತರುತ್ತಿದ್ದರು. ಅವರೊಂದಿಗೆ ಕೆಲ ಬಾಂಗ್ಲಾದೇಶೀಯರನ್ನೂ ಕರೆತಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:24 am, Tue, 14 July 26

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ