ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗರ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ
Updated By: sandhya thejappa

Updated on: May 30, 2022 | 12:35 PM

ಮಂಗಳೂರು: ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹೀಗಿದ್ದರೂ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜಿನಲ್ಲಿ ಮುಸ್ಲಿಂ (Muslim) ಸಮುದಾಯದ 14 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 14 ವಿದ್ಯಾರ್ಥಿನಿಯರು ಇಂದೂ (ಮೇ 30) ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಶನಿವಾರ ಕೂಡಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದರು. ಆದರೆ ಹಿಜಾಬ್​ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್​ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: ಮಿಲ್ಕಿ ವೇಕಿಂತ 2.5 ಪಟ್ಟು ದೊಡ್ಡದಾದ ನಕ್ಷತ್ರ ಪತ್ತೆ; ನಕ್ಷತ್ರವನ್ನು ಸೆರೆ ಹಿಡಿದ ಹಬಲ್ ಬಾಹ್ಯಾಕಾಶ ದೂರದರ್ಶಕ

ಇದನ್ನೂ ಓದಿ
75th Cannes Film Festival: ಆಕರ್ಷಣೀಯ ಉಡುಗೆಯೊಂದಿಗೆ ಮಿಂಚಿದ ನಟಿ ದೀಪಿಕಾ ಪಡುಕೋಣೆ
ದೇಶದ ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಆರ್​ಎಸ್​ಎಸ್​ನವರು; ಸಿದ್ದರಾಮಯ್ಯ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ
Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಜಿಲ್ಲಾಧಿಕಾರಿ ಕಾಯುತ್ತಿರುವ ವಿದ್ಯಾರ್ಥಿನಿಯರು:
ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿಸಿ ಡಾ.ಕೆ.ವಿ.ರಾಜೇಂದ್ರರವರಿಗೆ ಕಾಯುತ್ತಿದ್ದಾರೆ.

Published On - 10:42 am, Mon, 30 May 22