AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 17, 2022 | 3:20 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ರೈಲ್ವೇ(Railway) ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು(Railway Stations) ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ(Works) ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್​ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​.17 ರಿಂದ ಇರುವುದಿಲ್ಲ. ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596), ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಗುರುವಾರದಿಂದ ರೈಲು ಸಂಚಾರ ರದ್ದಾಗುವ ಬಗ್ಗೆ ಬುಧವಾರ ಸಂಜೆ ಪ್ರಕಟಣೆ ಹೊರಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​

Published On - 2:57 pm, Thu, 17 March 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ