ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತದಿಂದಾಗಿ, ಮಂಗಳೂರು ವಿಶ್ವವಿದ್ಯಾಲಯವು 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಕಾರ್ಯನಿರ್ವಹಿಸುವುದಿಲ್ಲ. ಆದರೆ, ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ.

ಮಂಗಳೂರು, ಡಿಸೆಂಬರ್ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಬಂದ್ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ.
ಮುಚ್ಚಲಿರುವ ಕಾಲೇಜುಗಳು:
- ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್
- ಅಂಜುಮನ್ ಪ್ರಥಮ ದರ್ಜೆ ಕಾಲೇಜು, ಮಂಗಳೂರು
- ಅಮೃತ ಕಾಲೇಜು, ಪಡೀಲ್
- ಸಿಲಿಕಾನ್ ಕಾಲೇಜ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಕೊಂಚಾಡಿ
- ಮೊಗ್ಲಿಂಗ್ ಇನ್ಸ್ಟಿಟ್ಯೂಟ್ ಆಫ್ ಜರ್ಮನ್ ಲ್ಯಾಂಗ್ವೇಜ್, ಬಲ್ಮಠ
- ಸಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಮಂಗಳೂರು
- ರೊಸಾರಿಯೊ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಬೋಳಾರ
- ಕರಾವಳಿ ಕಾಲೇಜ್ ಆಫ್ ಎಜುಕೇಶನ್
- ಪ್ರೇಮಕಾಂತಿ ಕಾಲೇಜ್ ಆಫ್ ಎಜುಕೇಶನ್
- ಸೇಪಿಯೆನ್ಶಿಯ ಬೆಥನಿ ಪ್ರಥಮ ದರ್ಜೆ ಕಾಲೇಜು, ನೆಲ್ಯಾಡಿ
- ಶಾರದಾ ಮಹಿಳಾ ಕಾಲೇಜು, ಸುಳ್ಯ
- ರಾಮಕುಂಜೇಶ್ವರ ಕಾಲೇಜು
- ಹಝ್ರತ್ ಸಯ್ಯದ್ ಮದನಿ ಮಹಿಳಾ ಕಾಲೇಜು, ಉಳ್ಳಾಲ
- ಸೇಂಟ್ ಸೆಬಾಸ್ಟಿಯನ್ ಕಾಲೇಜ್ ಆಫ್ ಕಾಮರ್ಸ್
- ಸೇಂಟ್ ಥಾಮಸ್ ಕಾಲೇಜು, ಬೆಳ್ತಂಗಡಿ
- ಮಾರ್ ಇವಾನಿಯೋಸ್ ಕಾಲೇಜು, ಕಡಬ
- ಮಾಧವ ಪೈ ಕಾಲೇಜು, ಮಣಿಪಾಲ
- ಮೂಕಾಂಬಿಕಾ ಪ್ರಥಮ ದರ್ಜೆ ಕಾಲೇಜು, ಬೈಂದೂರು
- ವರಸಿದ್ಧಿ ವಿನಾಯಕ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
- ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಐರೋಡಿ ಉಡುಪಿ
- ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜು, ಕಾಪು
- ಕೃಷ್ಣಭಾಯಿ ವಾಸುದೇವ್ ಶೆಣೈ ಸ್ಮಾರಕ ಕಾಲೇಜು, ಕಟಪಾಡಿ
ಇದನ್ನೂ ಓದಿ: ಪೋಷಕರೇ ಗಮನಿಸಿ; ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ತೀವ್ರ ಕೊರತೆ ಉಂಟಾಗಿದ್ದು, ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿ ಕಾರ್ಯ ನಿರ್ವಹಿಸಬೇಕಾದ ಸ್ಥಿತಿ ಉದ್ಭವಿಸಿರುವ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು. ಹಳೆಯ ವಿಶ್ವವಿದ್ಯಾಲಯಗಳು ತೀವ್ರ ಅಧ್ಯಾಪಕರ ಕೊರತೆ ಎದುರಿಸುತ್ತಿದ್ದರೆ, ಹೊಸದಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳು ಪರ್ಯಾಪ್ತ ಬೋಧಕರು ಅಥವಾ ಸರ್ಕಾರಿ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಹೊಸ ವಿಶ್ವವಿದ್ಯಾಲಯಗಳು ಶುಲ್ಕವನ್ನು ಭಾರಿಯಾಗಿ ಹೆಚ್ಚಿಸಬೇಕಾದ ಪರಿಸ್ಥಿತಿ ಉಂಟಾಗಿ, ವಿದ್ಯಾರ್ಥಿಗಳ ದಾಖಲಾತಿಯೂ ಕಡಿಮೆಯಾಗುತ್ತಿದೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



