
ಮಂಗಳೂರು, ಡಿಸೆಂಬರ್ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಬಂದ್ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ.
ಇದನ್ನೂ ಓದಿ: ಪೋಷಕರೇ ಗಮನಿಸಿ; ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ತೀವ್ರ ಕೊರತೆ ಉಂಟಾಗಿದ್ದು, ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿ ಕಾರ್ಯ ನಿರ್ವಹಿಸಬೇಕಾದ ಸ್ಥಿತಿ ಉದ್ಭವಿಸಿರುವ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು. ಹಳೆಯ ವಿಶ್ವವಿದ್ಯಾಲಯಗಳು ತೀವ್ರ ಅಧ್ಯಾಪಕರ ಕೊರತೆ ಎದುರಿಸುತ್ತಿದ್ದರೆ, ಹೊಸದಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳು ಪರ್ಯಾಪ್ತ ಬೋಧಕರು ಅಥವಾ ಸರ್ಕಾರಿ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಹೊಸ ವಿಶ್ವವಿದ್ಯಾಲಯಗಳು ಶುಲ್ಕವನ್ನು ಭಾರಿಯಾಗಿ ಹೆಚ್ಚಿಸಬೇಕಾದ ಪರಿಸ್ಥಿತಿ ಉಂಟಾಗಿ, ವಿದ್ಯಾರ್ಥಿಗಳ ದಾಖಲಾತಿಯೂ ಕಡಿಮೆಯಾಗುತ್ತಿದೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.