ಮಂಗಳೂರು: ಶಾಲಾ- ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸುವಂತಿಲ್ಲ ಎಂದು ಹೈಕೋರ್ಟ್ (High Court) ಆದೇಶ ಹೊರಡಿಸಿದ್ದರೂ, ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಉಪ್ಪಿನಂಗಡಿ ಪದವಿ ಕಾಲೇಜಿಗೆ ಆಗಮಿಸಿದ್ದರು. ಹೀಗೆ ಹಿಜಾಬ್ಗೆ ಪಟ್ಟು ಹಿಡಿದಿದ್ದ 24 ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ಬಾರದಂತೆ ಕಾಲೇಜು ನಿರ್ಬಂಧ ಹೇರಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದಂತೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ 7 ವಿದ್ಯಾರ್ಥಿನಿಯರ ಅಮಾನತುಗೊಂಡಿದ್ದರು. ಸುದ್ದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೂ ಹಲ್ಲೆ ನಡೆಸಿದ್ದರು. ಮೂವರ ಮೇಲೆ ಹಲ್ಲೆ ಮಾಡಿ ವಿದ್ಯಾರ್ಥಿನಿ ದೂರು ನೀಡಿದ್ದಳು. ದೂರು ಹಿನ್ನೆಲೆ ಉಪ್ಪಿನಂಗಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ಈ ಹಿಂದೆ ಇದೇ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಷೇಧದ ನಡುವೆಯೂ ಹಿಜಾಬ್ ಧರಿಸಿ ಬಂದಿದ್ದಳು. ಹಿಜಾಬ್ ಧರಿಸಿ ಬಂದಿದ್ದಕ್ಕೆ ಜೂನ್ 8ರವರೆಗೆ ಕಾಲೇಜಿನಿಂದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ: Bengaluru Covid Cases: ಕೊವಿಡ್ ಕೇಸುಗಳ ಹೆಚ್ಚಳ; ಬೆಂಗಳೂರಿನಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ವಿದ್ಯಾರ್ಥಿನಿಯರಿಗೆ ನೋಟಿಸ್ ಜಾರಿ:
ಇನ್ನು ಮಂಗಳೂರು ವಿವಿ ಕಾಲೇಜಿಗೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದ ಹಿನ್ನೆಲೆ ನಿನ್ನೆ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ವಿದ್ಯಾರ್ಥಿನಿಯರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ. ಗೌಸಿಯಾ ಸೇರಿದಂತೆ ಕೆಲ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಬಳಿಕವೂ ನಿಯಮ ಮೀರಿದರೆ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆಯು ಜೂನ್ 4 ರಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದರು. ಸೋಮವಾರ (ಮೇ 30) ರಂದು ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಮತ್ತೆ ಜೂನ್ 4 ರಂದು 16 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:01 pm, Tue, 7 June 22