Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ

ಹೊಸ ಮನೆಗೆ ಹೋದ ಐದೇ ದಿನದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು 24 ಪುಟಗಳ ಡೆತ್​ ನೋಟ್​ ಪತ್ತೆಯಾಗಿದೆ.

Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ
ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ.

Updated on: Jun 08, 2023 | 3:24 PM

ಮಂಗಳೂರು: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ. ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಗೃಹ ಪ್ರವೇಶವಾದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣಿಗೆ ಶರಣಾಗಿರುವುದು ದುರಂತ

ಆತ್ಮಹತ್ಯೆಗೂ ಮುನ್ನ ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಇದೀಗ ಗೃಹ ಪ್ರವೇಶವಾದ ಐದೇ ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಬವಾಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಪೊಲೀಸರು, ಡೆತ್​ ನೋಟ್​ ಮೂಲಕ ತನಿಖೆ ನಡೆಸಿದ್ದಾರೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us