ಮಂಗಳೂರು: 29ನೇ ಆಳ್ವಾಸ್ ವಿರಾಸತ್ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್​ಗೆ ಸಮರ್ಪಣೆ

ಆಳ್ವಾಸ್ ಎಜುಕೇಶನ್ ಫೌಂಡೇಶನ್ ಡಿಸೆಂಬರ್ 14 ರಿಂದ 17 ರವರೆಗೆ 29ನೇ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಈ ಸಾಂಸ್ಕೃತಿಕ ಸಂಭ್ರಮವನ್ನು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ಹೋರಾಡುತ್ತಾ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಸಮರ್ಪಿಸಲಾಗಿದೆ.

ಮಂಗಳೂರು: 29ನೇ ಆಳ್ವಾಸ್ ವಿರಾಸತ್ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್​ಗೆ ಸಮರ್ಪಣೆ
29ನೇ ಆಳ್ವಾಸ್ ವಿರಾಸತ್ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್​ಗೆ ಸಮರ್ಪಣೆ
Edited By:

Updated on: Dec 11, 2023 | 8:06 AM

ಮಂಗಳೂರು, ಡಿ.11: ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಯೋಜಿಸಿರುವ 29ನೇ ಆಳ್ವಾಸ್ ವಿರಾಸತ್ (Alva’s Virasat) ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ (MV Pranjal) ಅವರಿಗೆ ಸಮರ್ಪಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 14 ರಿಂದ 17 ರವರೆಗೆ ನಡೆಯುವ ಈ ಸಾಂಸ್ಕೃತಿಕ ಸಂಭ್ರಮದಲ್ಲಿ ಆಳ್ವಾಸ್ ವಿರಾಸತ್-2023 ಪ್ರಶಸ್ತಿಯನ್ನು ಸಂಗೀತಗಾರರಾದ ಡಾ. ಮೈಸೂರು ಮಂಜುನಾಥ್, ಪ್ರವೀಣ್ ಗೋಡ್ಖಿಂಡಿ ಮತ್ತು ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರಿಗೆ ನೀಡಲಾಗುವುದು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಿನ್ನಲೆ ಗಾಯಕ ಬೆನ್ನಿ ದಯಾಳ್ ಅವರು ಡಿ.15ರಂದು ಗಾನವೈಭವ ಹಾಗೂ 16 ರಂದು ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರಿಂದ ‘ಭಾವ ಲಹರಿ’ ಕಾರ್ಯಕ್ರಮ ನಡೆಯಲಿದೆ. ಎರಡೂ ದಿನ ಸಾಧಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು ಎಂದರು.

ಇದನ್ನೂ ಓದಿ: ಹುತಾತ್ಮ ಪ್ರಾಂಜಲ್​ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ

ಡಿಸೆಂಬರ್ 17 ರಂದು ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸಂಜೆ 6.30 ಕ್ಕೆ ಮೈಸೂರು ಮಂಜುನಾಥ್, ಗೋಡ್ಖಿಂಡಿ ಮತ್ತು ವಿಜಯ್ ಪ್ರಕಾಶ್ ಅವರಿಂದ ತಾಳ-ವಾದ್ಯ-ಸಂಗೀತ ಕಾರ್ಯಕ್ರಮ ನಡೆಯಲಿದೆ.

ಡಿ.14ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತಿಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಆಳ್ವಾಸ್ ವಿರಾಸತ್ ಉದ್ಘಾಟಿಸಲಿದ್ದು, ಉದ್ಘಾಟನೆಗೆ ಮುನ್ನ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100 ಕ್ಕೂ ಹೆಚ್ಚು ಸಾಂಸ್ಕೃತಿಕ ತಂಡಗಳು ಮತ್ತು 3,000 ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮೋಹನ್ ಆಳ್ವಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 am, Mon, 11 December 23