ಮಂಗಳೂರು: ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್ (Centring) ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರು (Laborers) ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಸುಳ್ಯ (Sulya) ತಾಲೂಕಿನ ಗಾಂಧಿನಗರದ ಗುರುಂಪು ಬಳಿ ನಡೆದಿದೆ. ಸೋಮಶೇಖರರೆಡ್ಡಿ(45), ಪತ್ನಿ ಶಾಂತಾ(40), ಮೃತ ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಸ್ಥಳೀಯರ ಸಹಾಯದಿಂದ ಶವಗಳನ್ನು ಹೊರತೆಗೆಯಲಾಗಿದೆ. ಮೃತಪಟ್ಟ ಕಾರ್ಮಿಕರು ಗದಗ ಜಿಲ್ಲೆ ಮುಂಡರಗಿ ಮೂಲದವರು ಎಂದು ಗುರುತಿಸಲಾಗುತ್ತಿದೆ. 7 ಕಾರ್ಮಿಕರು ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಗುಡ್ಡ ಕುಸಿತ ಉಂಟಾಗಿದೆ. ಮೂವರ ಮೃತದೇಹ ಸುಳ್ಯ ಆಸ್ಪತ್ರೆಗೆ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇಂದು (ಮಾ.25) ಮಧ್ಯಾಹ್ನ ಅಬೂಬಕ್ಕರ್ ಎಂಬುವರ ಮನೆಯ ಹಿಂದೆ ಬೃಹತ್ತಾದ ಬರೆ ತೆಗೆಯಲಾಗಿತ್ತು. ಅದರ ಅಡಿ ಫಿಲ್ಲರ್ ಹಾಕಿ ತಡೆಗೋಡೆ ನಿರ್ಮಾಣ ಮಾಡಲೆಂದು ಸೆಂಟ್ರಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ಇದಕ್ಕಿದ್ದಂತೆ ಮೇಲಿನಿಂದ ಬರೆಯ ಮಣ್ಣು ಕುಸಿದು ಬಿತ್ತು. ಕೆಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ವಿಷಯ ತಿಳಿದು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ನಂತರ ಪಕ್ಕದಲ್ಲಿಯೇ ಕೆಲಸ ಮಾಡುತ್ತಿದ್ದ ಇನ್ನೊಂದು ಜೆಸಿಬಿಯನ್ನು ತರಸಿ ಕಾರ್ಯಾಚರಣೆ ಮಾಡಲಾಗಿದೆ.
ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್ ನೀಡಿದ ಟ್ರಸ್ಟ್
ಅಕ್ರಮ ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ. ಬಿ.ಪಿ.ಆನಂದ್ ಕುಮಾರ್, ಪಾಂಡುರಂಗ ಸಿಂಗ್, ಗೋಪಾಲ್ ಸಿಂಗ್ ಪಾಲುದಾರಿಕೆಯ ಎಸ್ಬಿ ಮಿನರಲ್ಸ್ ಒಡೆತನದ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ 5.21 ಕೋಟಿ ಮೌಲ್ಯದ ಒಟ್ಟು ಆರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಎರಡು ಕಂಪನಿಗಳು ಕಬ್ಬಿಣದ ಅದಿರನ್ನು ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದವು. ಪ್ರಕರಣ ಸಂಬಂಧ ಎಸ್ಬಿ ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಸರ್ಕಾರಿ ನೌಕರರು ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಲೋಕಾಯುಕ್ತ ಎಸ್ಐಟಿ ದೂರು ದಾಖಲಿಸಿತ್ತು. ದೂರಿನ ಅನ್ವಯ ಕಂಪನಿಗಳ ವಿರುದ್ಧ ಇಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆರೋಪಿಯನ್ನೇ ಅಪಹರಿಸಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು
ಪೊಲೀಸರೇ ಆರೋಪಿಯನ್ನು ಅಪಹರಿಸಿ ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಸಿನಿಮೀಯ ಪ್ರಕರಣವೊಂದು ಬೆಂಗಳೂರಿನ ಮಾರತ್ತ ಹಳ್ಳಿಯಲ್ಲಿ ಬೆಳಕಿಗೆ ಬಂದಿತ್ತು. ಮಾರತ್ತಹಳ್ಳಿ ಪಿಎಸ್ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ವೇಳೆ ಪೊಲೀಸರೇ ಅಪಹರಣ ಎಸಗಿರುವುದು ತಿಳಿದುಬಂದಿತ್ತು. ಇದರ ಬೆನ್ನಲ್ಲೇ ಎಲ್ಲರನ್ನೂ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದರು.
ನಡೆದಿದ್ದೇನು?
ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ಆರೋಪಿ ರಾಮಾಂಜನಿ ಎಂಬಾತನನ್ನು ಮಾರ್ಚ್ 18 ರ ಸಂಜೆ 4.30 ಕ್ಕೆ ಅಪಹರಣ ಮಾಡಲಾಗಿತ್ತು. ಈ ವಿಚಾರವಾಗಿ ರಾಮಾಂಜನಿಯ ಸಂಬಂಧಿ ಶಿವರಾಮಯ್ಯ ಎಂಬವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಕೂಡಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದ ಬಾಗಲೂರು ಪೊಲೀಸರು ರಾಮಾಂಜನಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಪೊಲೀಸರೇ ಅಪಹರಣ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದನು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:19 pm, Sat, 25 March 23