ಮಂಗಳೂರಿನಲ್ಲಿ ಕೊವಿಡ್​ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಸಾವು, ಆರೋಗ್ಯ ಸಚಿವರು ಹೇಳಿದ್ದೇನು?

| Updated By: ರಮೇಶ್ ಬಿ. ಜವಳಗೇರಾ

Updated on: Dec 22, 2023 | 5:58 PM

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ 40 ವರ್ಷದ ವ್ಯಕ್ತಿಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಎರಡು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮಂಗಳೂರಿನಲ್ಲಿ ಕೊವಿಡ್​ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಸಾವು, ಆರೋಗ್ಯ ಸಚಿವರು ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Follow us on

ಮಂಗಳೂರು, (ಡಿಸೆಂಬರ್ 22): ಕರ್ನಾಟಕದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ(Coronavirus) ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಸಿರಾಟದ ಸಮಸ್ಯೆಯಿಂದಾಗಿ ಮಂಗಳೂರಿನ(Mangaluru) ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಭಾರತ ಮೂಲದ‌ 40 ವರ್ಷ‌ದ ವ್ಯಕ್ತಿ ಮೃತಪಟ್ಟಿದ್ದಾನೆ. 2 ದಿನಗಳ ಹಿಂದೆ ಮೃತ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನಿಗೆ ವೆನ್ಲಾಕ್​ನ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಇಂದು(ಡಿಸೆಂಬರ್ 22) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಇನ್ನು ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಲಸೆ ಕಾರ್ಮಿಕನಾಗಿ ಮಂಗಳೂರಿಗೆ ಬಂದಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ. ಕೋವಿಡ್ ನಿಂದಲೇ ಸಾವು ಆಗಿದೆಯಾ ಎಂದು ವೈದ್ಯರು ದೃಢಪಡಿಸಬೇಕಾಗಿದೆ ಎಂದರು.

ಕ್ರಿಸ್​ಮಸ್, ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್​ಲೈನ್ಸ್ ಇಲ್ಲ. ಜನ ಇರುವ ಪ್ರದೇಶದಲ್ಲಿ ಮಾಸ್ಕ್ ಧರಿಸಲು ಸಲಹೆ ಕೊಡುತ್ತೇವೆ. ಯಾವುದೂ ಕಡ್ಡಾಯ ಅಲ್ಲ, ನಾವು ಯಾವುದೇ ನಿರ್ಬಂಧ ವಿಧಿಸಲ್ಲ. ಕೊರೊನಾ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಅಷ್ಟು ತೀವ್ರವಾಗಿಲ್ಲ. ಸೋಮವಾರ ಅಥವಾ ಮಂಗಳವಾರ ಸಂಪುಟ ಉಪಸಮಿತಿ ಸಭೆ ನಡೆಯಲಿದೆ. ಕೇಂದ್ರ ಮತ್ತು ಬೇರೆ ರಾಜ್ಯಗಳ ಮಾಹಿತಿ ಪಡೆದು ಬಳಿಕ ಏನು ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಯಾವುದೇ ಕಾರ್ಯಕ್ರಮ ನಿಲ್ಲಿಸುವ ನಿರ್ಧಾರ ಮಾಡಿಲ್ಲ. ಈ ಕೊವಿಡ್ ಅಪಾಯಕಾರಿ ಅಲ್ಲ. ಆದರೂ ಕೂಡ ಮುನ್ನೆಚ್ಚರಿಕೆಯಲ್ಲಿ ನಾವು ಇರೋದು ಒಳ್ಳೆಯದು. ರಾಜ್ಯದಲ್ಲಿ ಸದ್ಯ ಐದು ಸಾವಿರ ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ. ಗಡಿ ಜಿಲ್ಲೆಯಾದ ಮೈಸೂರು, ಮಂಗಳೂರಿನಲ್ಲಿ ಟೆಸ್ಟಿಂಗ್​ ಹೆಚ್ಚಳಕ್ಕೆ ಸೂಚಿಸಲಾಗಿದೆ. ಹೆಚ್ಚು ಟೆಸ್ಟ್​​ ಮಾಡುವ ಅಗತ್ಯ ಇದೆಯಾ eಂದು ನಿರ್ಧಾರ ಮಾಡುತ್ತೇವೆ ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ