ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸರು ಕಳೆದ ಒಂದು ವಾರದಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
|

Updated on:Nov 18, 2023 | 7:41 AM

ಮಂಗಳೂರು ನ.18: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು (Mangaluru Police) ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (NDPS) ಕಾಯ್ದೆಯಡಿ 42 ಪ್ರಕರಣಗಳನ್ನುದಾಖಲಿಸಿಕೊಂಡಿದ್ದಾರೆ. ನವೆಂಬರ್ 6 ರಿಂದ 12 ರವರೆಗೆ ಪೊಲೀಸರು 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಮಾದಕ ದ್ರವ್ಯ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 13 ಜನರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆನ್‌ಲೈನ್ ವಂಚನೆಯಲ್ಲಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ವಂಚನೆಯಲ್ಲಿ ಮಹಿಳೆಯೊಬ್ಬರು 6.9 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಯೂಟ್ಯೂಬ್‌ನಲ್ಲಿ ಜಾಹೀರಾತನ್ನು ನೋಡಿದರು. ಅಲ್ಲಿ ಸೂಚಿಸಲಾಗಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ವಂಚಕನ ಟೆಲಿಗ್ರಾಮ್ ಮೆಸೆಂಜರ್ ಅಪ್ಲಿಕೇಶನ್‌ ಓಪನ್​ ಆಗಿದೆ. ತರಬೇತಿ ಬೋಧಕ (@kaiyun 0660) ಹೆಸರಿನಲ್ಲಿ ಖಾತೆಯನ್ನು ತೆರೆಯಲಾಗಿದೆ. ನಂತರ ವಂಚಕ ಹೇಳುವ ಹಂತಗಳನ್ನು ಮಹಿಳೆ ಒಂದೊಂದಾಗಿ ಪೂರ್ಣಗೊಳಿಸಿದ್ದಾರೆ. ಇದರಿಂದ ಮಹಿಳೆ ಐದು ಬ್ಯಾಂಕ್ ಖಾತೆಗಳಿಂದ ನವೆಂಬರ್ 1 ಮತ್ತು 7 ರ ನಡುವೆ 6.9 ಲಕ್ಷ ರೂ. ಕಳೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 18 November 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ