AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತ

ಮಂಗಳೂರು ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಮಂಗಳೂರಲ್ಲಿ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 25, 2023 | 3:09 PM

Share

ಮುಖ್ಯಾಂಶಗಳು

  • ಮಂಗಳೂರು ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ
  • ಏಪ್ರಿಲ್ 27ರ ಬೆಳಿಗ್ಗೆ 6 ಗಂಟೆಯಿಂದ 29ರ ಬೆಳಗ್ಗಿನ 6 ಗಂಟೆಯವರೆಗೆ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತವಾಗಲಿದೆ.
  • ತುಂಬೆ ಅಣೆಕಟ್ಟಿನ ಪಂಪಿಂಗ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾರ್ಯಗಳನ್ನು ಸುಗಮಗೊಳಿಸುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ.

ಮಂಗಳೂರು: ಮಂಗಳೂರು (Mangaluru) ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ (Water Supply) ವ್ಯತ್ಯಯವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ (Mangaluru Municipal Corporation) ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 27ರ ಬೆಳಿಗ್ಗೆ 6 ಗಂಟೆಯಿಂದ 29ರ ಬೆಳಗ್ಗಿನ 6 ಗಂಟೆಯವರೆಗೆ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತವಾಗಲಿದೆ. ತುಂಬೆ ಅಣೆಕಟ್ಟಿನ ಪಂಪಿಂಗ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾರ್ಯಗಳನ್ನು ಸುಗಮಗೊಳಿಸುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮನವಿ ಮಾಡಿಕೊಂಡಿದೆ.

ರಾಜ್ಯದ ಕರಾವಳಿಯಲ್ಲಿ ಸ್ಥಾಪನೆಯಾಗಲಿದೆ ಸೋಲಾರ್​ ಫಾರ್ಮ್​​

ಶ್ರೀಘದ್ರಲ್ಲೇ ರಾಜ್ಯದ ಕರಾವಳಿಯಲ್ಲಿ ಸೋಲಾರ್​ ಫಾರ್ಮ್​​ ತೆಲೆಯತ್ತಲಿದೆ. ಫ್ರಾನ್ಸ್ ಮೂಲದ ಕಂಪನಿಯೊಂದು ಸುರತ್ಕಲ್ ಲೈಟ್ ಹೌಸ್‌ನಿಂದ ಸುಮಾರು 10 ನಾಟಿಕಲ್​ ಮೈಲು ದೂರದ ಸಮುದ್ರದಲ್ಲಿ ಸೋಲಾರ್ ಫಾರ್ಮ್‌ ತೆರೆಯಲು ಮುಂದಾಗಿದೆ. ಇದು 1 ಮೆಗಾವ್ಯಾಟ್​ ವಿದ್ಯುತ್​ ಉತ್ಪಾದನೆ ಮಾಡಲಿದ್ದು, ಮೆಸ್ಕಾಂಗೆ ವಿದ್ಯುತ್ ಪೂರೈಸುತ್ತದೆ. ಫ್ರಾನ್ಸ್ ಮೂಲದ ಆಫ್‌ಶೋರ್ ಪೈಲಟ್ ಪ್ರಾಜೆಕ್ಟ್ ಸೋಲಾರ್​​ ಫಾರ್ಮ್ ಕಂಪನಿಯು ತನ್ನ ಭಾರತ ಮೂಲದ ಅಂಗಸಂಸ್ಥೆಯಾದ ಸೋಲಾರಿನ್‌ಬ್ಲೂ ಎನರ್ಜಿ ಮೂಲಕ ಹೂಡಿಕೆ ಮಾಡಲಿದೆ.

ಇದನ್ನೂ ಓದಿ: Mangalore Airport: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರು ಪಾರ್ಕಿಂಗ್​ಗೆ ವಿನೂತನ ಯೋಜನೆ ಜಾರಿ

ಈ ಕುರಿತು ಸೋಲಾರಿನ್‌ಬ್ಲೂ ಸಹ-ಸಂಸ್ಥಾಪಕ ಕಪಿಲ್ ಶರ್ಮಾ ಮಾತನಾಡಿ ಈಗಾಗಲೇ ಸ್ಥಳೀಯ ಸಂಸ್ಥೆಗಳು, ಕೇಂದ್ರ ಸರ್ಕಾರ ಮತ್ತು ಇತರರಿಂದ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದುಕೊಂಡಿದ್ದೇವೆ. ಎಲ್ಲವೂ ಸರಿಯಾಗಿ ನಡೆದರೆ, 2024ರಲ್ಲಿ ಸೌರ ಫಾರ್ಮ್ ಕೆಲಸ ಪ್ರಾರಂಭವಾಗಲಿದೆ. ಒಟ್ಟು 200ಮೀ x 200ಮೀ ವಿಸ್ತೀರ್ಣದಲ್ಲಿ 19ಮೀ ಆಳದಲ್ಲಿ ಸೋಲಾರ್​ ಫಾರ್ಮ್​​ ಅನ್ನು ಸ್ಥಾಪಿಸಲಾಗುತ್ತದೆ. ಈ ಯೋಜನೆ ಮೂಲಕ ವರ್ಷಕ್ಕೆ 1.5GWh ಗಿಂತ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದ 7,000 ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಪೂರೈಸಬಹುದಾಗಿದೆ ನಾವು ಮೊದಲು ಕೇರಳದಲ್ಲಿ ಸ್ಥಾಪಿಸಲು ಯೋಜನೆ ರೂಪಿಸಿದ್ದೇವು, ಆದರೆ ಅಂತಿಮವಾಗಿ ಮಂಗಳೂರಲ್ಲಿ ಸ್ಥಾಪಿಸಲು ನಿರ್ಧರಿಸಿದ್ದೇವೆ.

ಮಂಗಳೂರಲ್ಲಿ ಸ್ಥಾಪಿಸಲು ಕಾರಣಗಳು

1. ಇಲ್ಲಿ ಸಮುದ್ರದ ತಳವು ಯೋಜನೆಗೆ ಸೂಕ್ತವಾಗಿದೆ ಮತ್ತು ಸೌರ ಫಾರ್ಮ್ ಅನ್ನು ಚೆನ್ನಾಗಿ ಜೋಡಿಸಬಹುದು.

2. ಸರ್ಕಾರದ ನೀತಿಗಳು ಮತ್ತು ಇತರ ಅಂಶಗಳು. ಸಂಸ್ಥೆಯು ಎಲ್ಲಾ ಕಾರ್ಯಸಾಧ್ಯತೆಯ ಪರೀಕ್ಷೆಗಳನ್ನು ನಡೆಸಿದೆ. ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದರೇ ಮುಂದಿನ ಹಂತಕ್ಕೆ ಕೈ ಹಾಕಲಿದ್ದೇವೆ. ಇದರಿಂದ ಭವಿಷ್ಯದ ದಿನಗಳಲ್ಲಿ ಮೀನುಗಾರ ಸಮುದಾಯದವರಿಗೆ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 25 April 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?