ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು

ಗೋವನ್ನು ನಂಬಿ ಜೀವನ ನಡೆಸುತ್ತಿರುವ ಅದೆಷ್ಟೋ ಕುಟುಂಬಗಳು ಇಂದಿಗೂ ಇವೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿನ ಗ್ರಾಮದಲ್ಲಿನ ಜಾನುವಾರುಗಳು ನಿಗೂಢವಾಗಿ ಸಾವಿಗೀಡಾಗುತ್ತಿವೆ. ನರಳಿ ನರಳಿ ದನಗಳು ಸಾವನ್ನಪ್ಪುತ್ತಿರುವ ದೃಶ್ಯಗಳು ಕರುಳು ಹಿಂಡುವಂತಿವೆ. ಹಾಗಾದರೆ, ಈ ಜಾನುವಾರುಗಳ ಸಾವಿಗೆ ಕಾರಣವೇನು? ದನಗಳಿಗೆ ಏನಾಗಿದೆ? ಇಲ್ಲಿದೆ ವಿವರ

ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು
ದನಗಳು
Edited By: ವಿವೇಕ ಬಿರಾದಾರ

Updated on: Jun 23, 2025 | 9:58 PM

ಮಂಗಳೂರು, ಜೂನ್​ 23: ಮಂಗಳೂರು (Mangaluru) ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ವಿಚಿತ್ರವಾದ ಘಟನೆಯೊಂದು ನಡೆಯುತ್ತಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆಯನ್ನೇ ಮಾಡಿಕೊಂಡು ಬಂದಿರುವ ಪ್ರಕಾಶ್ ಅವರ ದನಗಳು (Cattle) ನಿಗೂಢವಾಗಿ ಸಾವಿಗೀಡಾಗಿವೆ. ಒಟ್ಟು 37 ದನಗಳಲ್ಲಿ 7 ದನಗಳು ಮೃತಪಟ್ಟಿವೆ. ಕೆಲ ದಿನಗಳ ಹಿಂದೆ ಮನೆ ಸಮೀಪದ ಗುಡ್ಡ ಪ್ರದೇಶಕ್ಕೆ ಮೇಯಲು ಹೋಗಿದ್ದ ದನಗಳು ಅಸ್ವಸ್ಥ ಸ್ಥಿತಿಯಲ್ಲಿ ವಾಪಾಸು ಕೊಟ್ಟಿಗೆಗೆ ಬಂದಿದ್ದವು. ಮೇಯಲು ಹೋಗಿದ್ದ 12 ದನಗಳಲ್ಲಿ ಎರಡು ಗರ್ಭ ಧರಿಸಿದ್ದ ದನ ಸೇರಿದಂತೆ ಒಟ್ಟು ಏಳು ಜಾನುವಾರುಗಳು ಸಾವನ್ನಪ್ಪಿವೆ.

ಈ ಜಾನುವಾರುಗಳು ನರಳಿ ನರಳಿ ಸಾವನ್ನಪ್ಪಿದ ದೃಶ್ಯ ಕರುಳು ಹಿಂಡುವಂತಿದೆ. ದನಗಳ ಕುತ್ತಿಗೆ ವಕ್ರವಾಗಿ ಕುಸಿದು ಬೀಳುತ್ತಿದ್ದು ಆಹಾರ ಸೇವಿಸಲು ಸಾಧ್ಯವಾಗದೆ ನರಳಿ ನರಳಿ‌ ಸಾವನ್ನಪ್ಪುತ್ತಿವೆ. ಈ ಜಾನುವಾರುಗಳ ಸಾವಿಗೆ ಯಾರೋ ವಿರೋಧಿಗಳು ವಿಷಪ್ರಾಶನ ಮಾಡಿರುವ ಅನುಮಾನ ಪ್ರಕಾಶ್ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನೂರಕ್ಕೆ ನೂರು ವಿಷಪ್ರಾಶನ ಆಗಿರುವ ಸಂಶಯ ವ್ಯಕ್ತಪಡಿಸಿರುವ ಅವರು ಕೃತ್ಯ ಎಸಗಿದರಿಗೆ ಹಿಡಿಶಾಪ ಹಾಕಿದ್ದಾರೆ. ಬಹಳ ಪ್ರೀತಿಯಿಂದ ದನ ಕರುಗಳನ್ನು ನೋಡಿಕೊಳ್ಳುತ್ತಿದ್ದ ಪ್ರಕಾಶ್ ಕುಟುಂಬ ಜಾನುವಾರುಗಳ ಅಕಾಲಿಕ ಸಾವಿನಿಂದ ಆಘಾತಕ್ಕೆ ಒಳಗಾಗಿದೆ. ಇತ್ತ ತಾಯಿಯನ್ನು ಕಳೆದುಕೊಂಡು ಕರುಗಳು ತಬ್ಬಲಿಯಾಗಿವೆ. ಯಾರದ್ದೋ ದ್ವೇಷಕ್ಕೆ ಮೂಕ ಪ್ರಾಣಿಗಳು ಬಲಿಯಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
ಮಂಗಳೂರು: ಹಲವು ಅತ್ಯಾಚಾರ, ಕೊಲೆಯ ಶವ ಹೂತುಹಾಕಿದ್ದೆ ಎಂದ ವ್ಯಕ್ತಿ!
ಮಂಗಳೂರು: ಅಪಾಯ ಆಹ್ವಾನಿಸುವ ರನ್​ವೇ, ಈಡೇರಿಲ್ಲ ವಿಸ್ತರಣೆ ಬೇಡಿಕೆ
ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿ ಕೊನೆಗೂ ಅಮಾನತು
ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​​ ಕಾರ್ಯಕರ್ತ

ಇದನ್ನೂ ಓದಿ: ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಜಾನುವಾರುಗಳ ನಿಗೂಢವಾಗಿ ಸಾವನ್ನಪ್ಪಿದ ಸ್ಥಳಕ್ಕೆ ಪಶುಪಾಲನೆ ಇಲಾಖೆ ವೈದ್ಯರು ಭೇಟಿ ನೀಡಿ ಮೃತ ದನ ಕರುಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಸದ್ಯ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಿದ್ದು ವರದಿ ಇನ್ನಷ್ಟೇ ಕೈ ಸೇರಬೇಕಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಜಾನುವಾರುಗಳ ನಿಗೂಢ ಸಾವಿಗೆ ಕಾರಣವೇನೆಂದು ತಿಳಿಯಲಿದೆ. ಕೊಟ್ಟಿಗೆಯ ಪಕ್ಕದಲ್ಲೇ ಮೃತ ಜಾನುವಾರುಗಳ ಅಂತ್ಯಕ್ರೀಯ ಕಾರ್ಯ ನೆರವೇರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us