AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರಸ್ತೆಯಲ್ಲೇ ನಮಾಜ್, ಹನುಮಾನ್ ಚಾಲೀಸ್ ಪಠಣಕ್ಕೆ ಕರೆ: ಶರಣ್ ಪಂಪ್‌ವೆಲ್‌ ವಿರುದ್ಧ ಎಫ್​ಐಆರ್

ಕಳೆದ ಶುಕ್ರವಾರ(ಮೇ.24) ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದರು. ಇದಕ್ಕೆ ಎಲ್ಲೆಡೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅದರಂತೆ ವಿಎಚ್.ಪಿ ಮುಖಂಡ ಶರಣ್ ಪಂಪ್‌ವೆಲ್‌(Sharan Pumpwell), ‘ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನಲೆ ಶರಣ್ ಪಂಪ್‌ವೆಲ್‌ ಮೇಲೆ ಮಂಗಳೂರು ನಗರ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರಿನಲ್ಲಿ ರಸ್ತೆಯಲ್ಲೇ ನಮಾಜ್, ಹನುಮಾನ್ ಚಾಲೀಸ್ ಪಠಣಕ್ಕೆ ಕರೆ: ಶರಣ್ ಪಂಪ್‌ವೆಲ್‌ ವಿರುದ್ಧ ಎಫ್​ಐಆರ್
ಹನುಮಾನ್ ಚಾಲೀಸ್ ಪಠಣಕ್ಕೆ ಕರೆ: ಶರಣ್ ಪಂಪ್‌ವೆಲ್‌ ವಿರುದ್ಧ ಎಫ್​ಐಆರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 30, 2024 | 10:22 PM

Share

ದಕ್ಷಿಣ ಕನ್ನಡ, ಮೇ.30: ಮಂಗಳೂರು(Mangalore) ರಸ್ತೆಯಲ್ಲೇ ನಮಾಜ್ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದ ವಿಎಚ್.ಪಿ ಮುಖಂಡ ಶರಣ್ ಪಂಪ್‌ವೆಲ್‌(Sharan Pumpwell), ‘ಸಾಮೂಹಿಕ ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನಲೆ ಶರಣ್ ಪಂಪ್‌ವೆಲ್‌ ಮೇಲೆ ಮಂಗಳೂರು ನಗರ ಸೆನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(a), 506 ಅಡಿ ದೂರು ದಾಖಲಾಗಿದೆ.

ಘಟನೆ ವಿವರ

ಕಳೆದ ಶುಕ್ರವಾರ(ಮೇ.24) ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದರು. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದರು. ಬಳಿಕ ನಮಾಜ್​ ಮಾಡಿದ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಇದಕ್ಕೆ ವ್ಯಾಪಕ ಅಸಮಧಾನ ವ್ಯಕ್ತವಾಗಿತ್ತು. ಈ ಹಿನ್ನಲೆ ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇದನ್ನೂ ಓದಿ:ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್

ಕಿಡಿಕಾರಿದ್ದ ಶರಣ್ ಪಂಪ್​ವೆಲ್​

ಚುನಾವಣೆ ವೇಳೆ ರಸ್ತೆಯಲ್ಲಿ ಇಫ್ತಾರ್ ಕೂಟ ಮಾಡಿದ್ದಾಗ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಮುಂದುವರೆದ ಭಾಗವಾಗಿ ಈಗ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ‌ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಅಲ್ಲಿಯೇ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಲಾಗುವುದು ಎಂದು  ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಇದೀಗ ಪೊಲೀಸರು ಶರಣ್​ ಪಂಪ್​ವೆಲ್​ ವಿರುದ್ದ ಎಫ್​ಐಆರ್​ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ