ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ವಿಚಾರ; ಮಂಗಳೂರಿನಲ್ಲಿ ಪ್ರಕರಣ ದಾಖಲು

ಫೇಸ್ ಬುಕ್​ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಅಂತ ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ.

ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ವಿಚಾರ; ಮಂಗಳೂರಿನಲ್ಲಿ ಪ್ರಕರಣ ದಾಖಲು
ಜನರಲ್ ಬಿಪಿನ್ ರಾವತ್
Follow us
TV9 Web
| Updated By: sandhya thejappa

Updated on:Dec 11, 2021 | 1:07 PM

ಮಂಗಳೂರು: ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ 3 ಫೇಸ್​ಬುಕ್​ ಪೋಸ್ಟ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ ಒಬ್ಬರು ಕಾರ್ಕಳ ಮೂಲ, ಇನ್ನೊಬ್ಬ ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಅಂತ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೇಸ್ ಬುಕ್​ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಅಂತ ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆರಗ ಜ್ಞಾನೇಂದ್ರ ಸೂಚನೆ ಸಿಡಿಎಸ್ ಬಿಪಿನ್ ರಾವತ್ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.

ಉಡುಪಿ ಮೂಲದ ಬರಹಗಾರನ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶ ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಡುಪಿ ಮೂಲದ ಬರಹಗಾರರೊಬ್ಬರ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ. ಈ ಸಂಬಂಧ ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಸಮಾಜಿಕ ಜಾಲತಾಣದಲ್ಲಿ ಆಗ್ರಹಗಳು ಕೇಳಿಬಂದಿವೆ.

ಇದನ್ನೂ ಓದಿ

ಯುವತಿಯನ್ನು ಹಿಂಬಾಲಿಸಿದ ಆರೋಪ; ಭಾರತೀಯ ಮೂಲದ ವಿದ್ಯಾರ್ಥಿಯನ್ನು ಹೊರಹಾಕಿದ ಬ್ರಿಟನ್ ವಿವಿ

ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ರೌಡಿಗಳ ಅಟ್ಟಹಾಸ; ಲಾಂಗ್​ನಿಂದ ಮನೆ ಬಳಿ ನಿಲ್ಲಿಸಿದ್ದ ಕಾರು, ಇನ್ನಿತರ ವಾಹನಗಳ ಗಾಜು ಪುಡಿ

Published On - 1:05 pm, Sat, 11 December 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ