ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ದೂರು ಕೊಡಲು ಹೋಗಿದ್ದ ಮಹಿಳೆಗೆ ಪೊಲೀಸ್​ ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಲೈಂಗಿಕವಾಗಿ ಸಹಕರಿಸು. ಇಲ್ಲ ಅಂದ್ರೆ 25 ಲಕ್ಷ ಕೊಡು. ಅದು ಸಹ ಆಗದಿದ್ದರೆ ನಿನ್ನ ಗಂಡನ ಮೇಲೆ ರೌಡಿಶೀಟ್ ಓಪನ್ ಮಾಡುವುದಾಗಿ ಇನ್ಸ್​ಪೆಕ್ಟರ್​ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ, ಮಹಿಳೆ ಆರೋಪ ಮಾಡಿದ ಇನ್ಸ್​ಪೆಕ್ಟರ್​ ಯಾರು? ಏನಿದು ಪ್ರಕರಣ ಎನ್ನುವ ಮಾಹಿತಿ ಇಲ್ಲಿದೆ.

ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!
ಪ್ರಾತಿನಿಧಿಕ ಚಿತ್ರ
Edited By:

Updated on: Mar 17, 2026 | 3:37 PM

ಮಂಗಳೂರು, (ಮಾರ್ಚ್ 16): ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ (Woman) ಇನ್ಸ್​ಪೆಕ್ಟರ್ (Inspector) ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಮೂಡಬಿದ್ರೆ ಪೊಲೀಸ್​ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್​ಪೆಕ್ಟರ್​ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

ಮಹಿಳೆಯ ಆರೋಪವೇನು?

ಪ್ರಕರಣವೊಂದರಲ್ಲಿ ಮೂಡಬಿದ್ರೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಸಂಬಂಧ ಬಂಧಿತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾಳೆ. ಈ ವೇಳೆ ಇನ್ಸ್​ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಮಹಿಳೆಯೇ ಆರೋಪಿಸಿದ್ದಾರೆ. ಪತಿಯನ್ನು ಬಿಡಬೇಕಂದ್ರೆ ಲೈಂಗಿಕವಾಗಿ ಸಹಕರಿಸು. ಇಲ್ಲ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲಿ ಪೋಸ್ಟ್​ಗಾಗಿ ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹಣ ಕೊಡದಿದ್ರೆ ನಿನ್ನ ಪತಿ ಮೇಲೆ ರೌಡಿಶೀಟ್ ಓಪನ್ ಮಾಡುತ್ತೇನೆ ಎಂದು ಇನ್ಸ್​ಪೆಕ್ಟರ್ ಸಂದೇಶವನ್ನ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ನೂರಾರು ಮಹಿಳೆಯರು ಇದೇ ರೀತಿ ನನ್ನ ಜೊತೆಗೆ ಇದ್ದಾರೆ. ಅವರಂತೆ ನೀನು ಕೂಡ ಲೈಂಗಿಕವಾಗಿ ಸಹಕರಿಸು. ಇಲ್ಲದಿದ್ರೆ ಡ್ರಗ್ಸ್​ ಪೆಡ್ಲರ್​ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯುತ್ತೇನೆ ಎಂದು ಇನ್ಸ್​ಪೆಕ್ಟರ್​ ಸಂದೇಶ್ ಧಮ್ಕಿ ಹಾಕಿದ್ದಾಗಿ ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಈ ಸಂಬಂಧ ಮಹಿಳೆ, ಇನ್ಸ್​ಪೆಕ್ಟರ್​ ಸಂದೇಶ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಯಾವುದೇ ಉಪಯೋಗವಾಗಿಲ್ಲ. ಪಿಐ ಸಂದೇಶ ಮೇಲೆ ಮೇಲಾಧಿಕಾರಿಗಳಿಗಳ ಕೃಪಾಕಟಾಕ್ಷ‌ ಇದೆ. ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Mon, 16 March 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us