AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ; ನೈಜೀರಿಯಾ ಮೂಲದ ಮಹಿಳೆಯ ಸೆರೆ

ಇತ್ತಿಚೇಗೆ ಮಂಗಳೂರು ಸಿಸಿಬಿ ಪೊಲೀಸರು ಲಕ್ಷಾಂತರ ಮೌಲ್ಯದ MDMA ಮಾರಾಟ ಜಾಲ ಭೇದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಮಹಿಳೆ ಅಡೆವೊಲೆ ಅಡೆಟುಡು ಆನು MDMA ಡ್ರಗ್ ಪೂರೈಸಿದ್ದಳು. ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ; ನೈಜೀರಿಯಾ ಮೂಲದ ಮಹಿಳೆಯ ಸೆರೆ
ಬಂಧಿತ ಮಹಿಳೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Sep 02, 2023 | 9:24 PM

Share

ಮಂಗಳೂರು, ಸೆ.02: ಇತ್ತೀಚೆಗೆ ರಾಜ್ಯದಲ್ಲಿ ಮಾದಕ ವಸ್ತು ಜಾಲವನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತು ಹಾಕಲು ಪೊಲೀಸರು ಟೊಂಕ ಕಟ್ಟಿ ನಿಂತಂತೆ ಕಾಣುತ್ತಿದೆ. ಹೌದು, ರಾಜ್ಯದ ಹಲವಾರು ಕಡೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡುವವರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ಅದರಂತೆ ಇದೀಗ ನಿಷೇಧಿತ MDMA ಮಾರಾಟ ಜಾಲದ ಪ್ರಮುಖ ಡ್ರಗ್ ಪೆಡ್ಲರ್​ನ್ನು (Drug Peddler) ಬೆಂಗಳೂರಿನ (Bengaluru) ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಸೆರೆ ಹಿಡಿಯಲಾಗಿದೆ. ನೈಜೀರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಬಂಧಿತ ಮಹಿಳೆ.

ಬಂಧಿತ ಮಹಿಳೆ ಮೇಲೆ ಮಂಗಳೂರಿನಲ್ಲಿ ಕೇಸ್​

ಇನ್ನು ಇತ್ತಿಚೇಗೆ ಮಂಗಳೂರು ಸಿಸಿಬಿ ಪೊಲೀಸರು ಲಕ್ಷಾಂತರ ಮೌಲ್ಯದ MDMA ಮಾರಾಟ ಜಾಲ ಭೇದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಮಹಿಳೆ ಅಡೆವೊಲೆ ಅಡೆಟುಡು ಆನು MDMA ಡ್ರಗ್ ಪೂರೈಸಿದ್ದಳು. ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಮಹಿಳೆಯ ಬೆಂಗಳೂರಿನ ಮನೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಲಾಗಿತ್ತು. ದಾಳಿ ವೇಳೆ 400 ಗ್ರಾಂ ತೂಕದ 20 ಲಕ್ಷ ರೂಪಾಯಿ ಮೌಲ್ಯದ MDMA ಮತ್ತು ನಗದು, ಐಫೋನ್‌ ಮೊಬೈಲ್ ಸೇರಿದಂತೆ ಒಟ್ಟು 20 ಲಕ್ಷ ಮೌಲ್ಯದ 52 ಸಾವಿರ ಮೌಲ್ಯದ ಸೊತ್ತುಗಳ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಪೊಲೀಸರ ಭರ್ಜರಿ ಕಾರ್ಯಚರಣೆ, ದಿಲ್ಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಜಾಲ ಪತ್ತೆ, 7 ಪೆಡ್ಲರ್​​ಗಳ ಬಂಧನ

ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಮಹಿಳೆ

ಈ ಬಂಧಿತ ಮಹಿಳೆ ನೈಜೀರಿಯಾ ದೇಶದಿಂದ ವ್ಯಾಸಂಗ ವೀಸಾದಡಿ ಭಾರತಕ್ಕೆ ಬಂದಿದ್ದರು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಮಹಿಳೆ. ಬಳಿಕ ಈ ದಂಧೆಗೆ ಇಳಿದಿದ್ದಾರೆ. ಇನ್ನು ಆರೋಪಿಯ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಒಟ್ಟು 7 ಪ್ರಕರಣ ದಾಖಲಾಗಿದೆ. ಇನ್ನು ಇದುವರೆಗೂ ಪೊಲೀಸರು ಬಂಧಿಸಿದ 7 ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಕೂಡ ಈಕೆಯಿಂದಲೇ ಮಾದಕ ವಸ್ತು ಖರೀದಿ ಮಾಡಿದ್ದರಂತೆ. ಸದ್ಯ ಆರೋಪಿ ಮಹಿಳೆಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ