Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ದಂಪತಿ ಆತ್ಮಹತ್ಯೆಗೆ ಮೇಜರ್ ಟ್ವಿಸ್ಟ್; ಕೊವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ರಿಪೋರ್ಟ್

ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಅಂತ ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್​ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಈ ವೇಳೆ ತಕ್ಷಣ ಕಮಿಷನರ್ ಕಾಲ್ ಮಾಡಿದ್ರೂ ಅವರು ಎತ್ತಲಿಲ್ಲ.

ಮಂಗಳೂರು ದಂಪತಿ ಆತ್ಮಹತ್ಯೆಗೆ ಮೇಜರ್ ಟ್ವಿಸ್ಟ್; ಕೊವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ರಿಪೋರ್ಟ್
ಆತ್ಮಹತ್ಯಗೆ ಶರಣಾಗಿರುವ ದಂಪತಿ
Follow us
TV9 Web
| Updated By: sandhya thejappa

Updated on:Aug 17, 2021 | 12:28 PM

ಮಂಗಳೂರು: ಕೊರೊನಾ (Coronavirus) ಮತ್ತು ಬ್ಲ್ಯಾಕ್ ಫಂಗಸ್​ಗೆ (Black Fungus) ಹೆದರಿ ಆತ್ನಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ಸೋಂಕಿನ ಭಯಕ್ಕೆ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಹೇಳಲಾಗುತ್ತಿದೆ. ದಂಪತಿ ನೇಣಿಗೆ ಶರಣಾಗಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಡೆತ್ ನೋಟಲ್ಲಿ ನಮಗೆ ಕೊರೊನಾ ಇದೆ, ಬ್ಲ್ಯಾಕ್ ಫಂಗಸ್ ಬಂದರೆ ಸಮಸ್ಯೆ ಅಂತೆಲ್ಲಾ ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಇರುವ ಬಗ್ಗೆ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.

ರಿಪೋರ್ಟ್ ನೆಗೆಟಿವ್ ಆತ್ಮಹತ್ಯೆಗೆ ಶರಣಾಗಿದ್ದ ದಂಪತಿಯ ಮೃತದೇಹವನ್ನು ಟೆಸ್ಟ್ ಮಾಡಿದ ಬಳಿಕ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಪೋಸ್ಟ್ ಮಾರ್ಟಮ್​ಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ರಿಪೋರ್ಟ್ ನೆಗೆಟಿವ್ ಎಂದು ತಿಳಿದು ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹವನ್ನು ಪೋಸ್ಟ್‌ ಮಾರ್ಟಮ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಅಂತ ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್​ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಈ ವೇಳೆ ತಕ್ಷಣ ಕಮಿಷನರ್ ಕಾಲ್ ಮಾಡಿದ್ರೂ ಅವರು ಎತ್ತಲಿಲ್ಲ. ವಾಯ್ಸ್ ಮೆಸೇಜ್ ಮಾಡಿ ಧೈರ್ಯ ತುಂಬಿದ್ರೂ ರಿಪ್ಲೈ ಮಾಡಿಲ್ಲ. ನಂತರ ಲೊಕೇಶನ್ ಟ್ರೇಸ್ ಮಾಡಿ, ಪೊಲೀಸ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಡಿಸಿಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು.

ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.

ಇನ್ನು ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಬಹಳ ನೋವಿನ ಸಂಗತಿಯಾಗಿದೆ. ಕೊರೊನಾ ಸೋಂಕು ಬಂದ ಕೂಡಲೇ ಯಾರೂ ಸಾಯಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾಡಿಕೊಂಡಿರಬಹುದು. ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಕೊರೊನಾ ಲಕ್ಷಣ ಕಂಡುಬಂದರೆ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯ ಇಲಾಖೆ, ವೈದ್ಯರು ನಿಮ್ಮ ಜೊತೆ ಇರುತ್ತಾರೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ

ತಮಿಳುನಾಡಿನಂತೆ ನಮ್ಮ ರಾಜ್ಯದಲ್ಲೇನೂ ಪೆಟ್ರೋಲ್ ಬೆಲೆ ಕಡಿತ ಇಲ್ಲ: ಸಿಎಂ ಬೊಮ್ಮಾಯಿ

ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

(According to health officer a Mangalore couple who committed suicide did not have a corona infection)

Published On - 11:17 am, Tue, 17 August 21

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್