ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರದ ಕಚೇರಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಆರೋಪಿಯು ಯುವತಿಗೆ ವಾಟ್ಸ್ಯಾಪ್ನಲ್ಲಿ ನಗ್ನಚಿತ್ರ ಕಳಿಸಿದ್ದರು. ತಮ್ಮ ಒತ್ತಾಯಕ್ಕೆ ಸಹಕರಿಸದ ಕಾರಣಕ್ಕೆ ಸಹಕರಿಸದ ಹಿನ್ನೆಲೆ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಯುವತಿ ಕೆಲಸ ಬಿಟ್ಟಿದ್ದರು. ಯುವತಿ ನೀಡಿದ ದೂರು ಆಧರಿಸಿ ಆರೋಪಿ ಫಾರೂಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯದ ನೆಶೆ: ಗುಂಡು ಹಾರಿಸಿ ತಾಯಿ, ತಂಗಿ ಹತ್ಯೆ ಮದ್ಯದ ನಶೆಯಲ್ಲಿದ್ದ ಯುವಕನೊಬ್ಬ ಸಾಂಬಾರ್ ಸರಿಯಿಲ್ಲ ಎಂಬ ಕಾರಣಕ್ಕೆ ಗುಂಡು ಹಾರಿಸಿ ತಾಯಿ, ತಂಗಿಯನ್ನು ಯುವಕನೊಬ್ಬ ಹತ್ಯೆ ಮಾಡಿದ್ದಾನೆ. ಉತ್ತರ ಕನ್ನಡ ಜಿಲ್ಲೆ ದೊಡ್ಮನೆ ಗ್ರಾಮದ ಕುಡಗೋಡು ಬಳಿ ಘಟನೆ ನಡೆದಿದೆ. ಮೃತರನ್ನು ಪಾರ್ವತಿ ನಾರಾಯಣ ಹಸ್ಲರ್, ರಮ್ಯಾ ನಾರಾಯಣ ಎಂದು ಗುರುತಿಸಲಾಗಿದೆ. ಆರೋಪಿ ಮಂಜುನಾಥ್ನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿ, ಆಕೆ ಮೈಮೇಲಿದ್ದ ಚಿನ್ನಾಭರಣ ದೋಚಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುದ್ದೇಬಿಹಾಳ ಪೊಲೀಸರು ಬಂಧಿಸಿದ್ದಾರೆ. ಬಹಿರ್ದೆಸೆಗೆ ತೆರಳಿದ್ದ ವೇಳೆ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಅತ್ಯಾಚಾರದ ನಂತರ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ. ಬಾಲಕಿಗಾಗಿ ಹುಡುಕಾಡಿದ್ದ ಪೋಷಕರು ನಂತರ ಮುದ್ದೇಬಿಹಾಳ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ರುದ್ರಯ್ಯನನ್ನು ಬಂಧಿಸಿದ್ದ ಪೊಲೀಸರು ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ.