AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಪ್ರಕರಣ; ಲೆಕ್ಚರರ್ ನನ್ನ ಮೇಲೆ ಬ್ಲ್ಯಾಕ್ ಮ್ಯಾಜಿಕ್ ಮಾಡಿದ್ದಾರೆ ಎಂದ ಆರೋಪಿ

ಬ್ಲ್ಯಾಕ್ ಮ್ಯಾಜಿಕ್ ತೆಗೆಯುವಂತೆ ಹೇಳಲು ನಿನ್ನೆ ಬಂದಿದ್ದೆ. ಲೆಕ್ಚರರ್ ವೀಣಾ ಇಲ್ಲದ ಕಾರಣ ಕೋಪ ಬಂದು ಅಟ್ಯಾಕ್ ಮಾಡಿದೆ ಅಂತ ಪೊಲೀಸ್ ವಿಚಾರಣೆಯಲ್ಲಿ ಆರೋಪಿ ನವೀನ್ ಶೆಟ್ಟಿ ಹೇಳಿಕೆ ಕೊಟ್ಟಿದ್ದಾನೆ.

ಮಂಗಳೂರಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಪ್ರಕರಣ; ಲೆಕ್ಚರರ್ ನನ್ನ ಮೇಲೆ ಬ್ಲ್ಯಾಕ್ ಮ್ಯಾಜಿಕ್ ಮಾಡಿದ್ದಾರೆ ಎಂದ ಆರೋಪಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 21, 2021 | 10:32 AM

Share

ಮಂಗಳೂರು: ನಿನ್ನೆ ನಗರದ ಕರಂಗಲಪಾಡಿ ಬಳಿ ಸರ್ಕಾರಿ ಕಚೇರಿಯಲ್ಲಿ ಮೂವರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ಮಾಡಿದ್ದ. ಹಲ್ಲೆ ಮಾಡಿದ್ದ ಆರೋಪಿ ನವೀನ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಆರೋಪಿ ಲೆಕ್ಚರರ್ ನನ್ನ ಮೇಲೆ ಬ್ಲ್ಯಾಕ್ ಮ್ಯಾಜಿಕ್ ಮಾಡಿದ್ದಾರೆ. ವಿದ್ಯಾಭ್ಯಾಸ ಮಾಡುವಾಗ ಲೆಕ್ಚರರ್ ನನ್ನನ್ನು ಅವಮಾನಿಸಿದ್ದರು. ವಿನಾಕಾರಣ ಲೆಕ್ಚರರ್ ವೀಣಾ ನನಗೆ ಕಿರುಕುಳ ಕೊಡುತ್ತಿದ್ದರು. ಬ್ಲ್ಯಾಕ್ ಮ್ಯಾಜಿಕ್ನಿಂದ ನನಗೆ ಈಗಲೂ ತೊಂದರೆಯಾಗುತ್ತಿದೆ ಅಂತ ಹೇಳಿಕೆ ನೀಡಿದ್ದಾನೆ.

ಬ್ಲ್ಯಾಕ್ ಮ್ಯಾಜಿಕ್ ತೆಗೆಯುವಂತೆ ಹೇಳಲು ನಿನ್ನೆ ಬಂದಿದ್ದೆ. ಲೆಕ್ಚರರ್ ವೀಣಾ ಇಲ್ಲದ ಕಾರಣ ಕೋಪ ಬಂದು ಅಟ್ಯಾಕ್ ಮಾಡಿದೆ ಅಂತ ಪೊಲೀಸ್ ವಿಚಾರಣೆಯಲ್ಲಿ ಆರೋಪಿ ನವೀನ್ ಶೆಟ್ಟಿ ಹೇಳಿಕೆ ಕೊಟ್ಟಿದ್ದಾನೆ.

ವೀಣಾ ಎಂಬುವವರ ಮೇಲೆ ಕೋಪಗೊಂಡಿದ್ದ ಆರೋಪಿ ನವೀನ್ ಶೆಟ್ಟಿ ಕಚೇರಿಯಲ್ಲಿದ್ದ ಇದ್ದ ನಿರ್ಮಲಾ, ರೀನಾ ರಾಯ್, ಗುಣವತಿ ಮೇಲೆ ದಾಳಿ ಮಾಡಿದ್ದ. ಆ ಪೈಕಿ ನಿರ್ಮಲಾ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬರ್ಕೆ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದರು.

ಸರ್ಕಾರಿ ಕಚೇರಿಗೆ ನುಗ್ಗಿ ಕೊಲೆ ಬೆದರಿಕೆ ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಒಡ್ಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ ಹಾಕಿದ್ದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಟಿ. ಕುಮಾರ್, ಇತರರ ವಿರುದ್ಧ ಬಿ.ಕೆ. ನಾಗರಾಜಪ್ಪ ದೂರು ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ

ಒಂದೇ ಒಂದು ಗುಡ್​ ನ್ಯೂಸ್​ಗಾಗಿ ಕಾಯುತ್ತಿದೆ ಚಿತ್ರರಂಗ; ಮತ್ತೆ ರಂಗೇರಲಿದೆ ಗಾಂಧಿನಗರ

ಸಾವಿಗೂ ಮುನ್ನ ವಿಡಿಯೋ ಮಾಡಿದ್ದ ಮಹಾಂತ ನರೇಂದ್ರ ಗಿರಿ; ಶಿಷ್ಯನನ್ನು ಹರಿದ್ವಾರದಲ್ಲಿ ವಶಕ್ಕೆ ಪಡೆದ ಪೊಲೀಸರು

(accused told me the lecturer had done black magic on me in Mangaluru)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್