ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಗೌಪ್ಯ ಸ್ಥಳದಲ್ಲಿಟ್ಟು ಆರೋಪಿಗಳ ವಿಚಾರಣೆ

| Updated By: sandhya thejappa

Updated on: Jul 31, 2022 | 10:18 AM

ಆರೋಪಿಗಳ ಬಾಯಿ ಬಿಡಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಂಧಿತರು ಯಾವುದೇ ಮಾಹಿತಿ ನೀಡದ ಹಿನ್ನೆಲೆ ಇನ್ನು ಪ್ರಮುಖ ಆರೋಪಿಗಳು ಪತ್ತೆ ಆಗಿಲ್ಲ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಗೌಪ್ಯ ಸ್ಥಳದಲ್ಲಿಟ್ಟು ಆರೋಪಿಗಳ ವಿಚಾರಣೆ
ಬಂಧಿತ ಆರೋಪಿಗಳು
Follow us on

ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ (BJP) ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣದ ಆರೋಪಿಗಳನ್ನ ಪೊಲೀಸರು ಗೌಪ್ಯ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಎಷ್ಟೇ ಪ್ರಯತ್ನ ಪಟ್ಟರೂ ಬಂಧನಕ್ಕೆ ಒಳಗಾಗಿರುವ ಆರೋಪಿಗಳಾದ ಜಾಕಿರ್ ಮತ್ತು ಶಫೀಕ್ ಬಾಯಿ ಬಿಡುತ್ತಿಲ್ಲ. ಇಬ್ಬರು ಉಳಿದ ಆರೋಪಿಗಳ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಸದ್ಯ ಆರೋಪಿಗಳ ಬಾಯಿ ಬಿಡಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಂಧಿತರು ಯಾವುದೇ ಮಾಹಿತಿ ನೀಡದ ಹಿನ್ನೆಲೆ ಇನ್ನು ಪ್ರಮುಖ ಆರೋಪಿಗಳು ಪತ್ತೆ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟು ಮೂರು ಆಯಾಮಗಳಲ್ಲಿ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಸೂದ್ ಕೊಲೆಗೆ ಪ್ರತೀಕಾರ ಎನ್ನುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಹಾಗೇ ಮೀನಿನ ಟೆಂಡರ್ ತಮ್ಮವರಿಗೆ ಕೊಡಿಸಿದ್ದಕ್ಕೆ ಪ್ರವೀಣ್‌ ಕೊಲೆ ಆಯ್ತಾ? ಅಂತಲೂ ತನಿಖೆ ನಡೆಸುತ್ತಿದ್ದಾರೆ. ಇನ್ನು 10 ತಿಂಗಳ ಹಿಂದಷ್ಟೇ ಪ್ರವೀಣ್ ಮಾಂಸದಂಗಡಿ ಇಟ್ಟಿದ್ದರು. ಇದೇ ಕಾರಣಕ್ಕೆ‌ ಕೊಲೆಯಾಗಿದೆಯಾ? ಎಂಬ ಮೂರು ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ITR filing: ಐಟಿ ರಿಟರ್ನ್ಸ್​ ಸಲ್ಲಿಸಲು ಇಂದು ಕೊನೆಯ ದಿನ; ಕಾರ್ಯನಿರ್ವಹಿಸಲಿವೆ ಆಯಕಾರ್ ಸೇವಾ ಕೇಂದ್ರಗಳು

ಇದನ್ನೂ ಓದಿ
CWG 2022: ಒಂದೇ ದಿನ ನಾಲ್ಕು ಪದಕ: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ
18 ವರ್ಷದ ಮಕ್ಕಳು ನಿಮ್ಮ ಮಾತು ಕೇಳ್ತಾ ಇಲ್ವಾ? ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟರವರ ಸಲಹೆ ಇಲ್ಲಿದೆ
ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ
Bangalore Rain: ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

ಮಸೂದ್ ಕೊಲೆ ನಡೆದ ಎರಡು ದಿನಗಳ ನಂತರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಹತ್ಯೆಗೈಯಲಾಗಿತ್ತು. ಅಂದಿನಿಂದ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲದೆ ಕಾರ್ಯಕರ್ತನನ್ನು ಕಳೆದುಕೊಂಡು ಕೆರಳಿದ ಕರಾವಳಿ ಬಿಜೆಪಿ ಪಡೆ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳ್ಳಾರೆಯಲ್ಲಿ ಆರಂಭವಾದ ಪ್ರತಿಭಟನೆಯ ಕಿಚ್ಚು ಕರಾವಳಿಯನ್ನು ವ್ಯಾಪಿಸಿ ನಂತರ ಇಡೀ ರಾಜ್ಯಕ್ಕೆ ಹಬ್ಬಿದೆ. ಅದರಂತೆ ಅಲ್ಲಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುತ್ತಿದೆ.

ಇದನ್ನೂ ಓದಿ: DHFL ಹಗರಣ : ಅವಿನಾಶ್ ಭೋಸಲೆ ಅವರ ಅಗಸ್ಟಾ ವೆಸ್ಟ್​ ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡ ಸಿಬಿಐ

Published On - 9:56 am, Sun, 31 July 22