ಮಂಗಳೂರು; ಕಾಲೇಜು ಆವರಣದಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಮಂಗಳೂರಿನ ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು; ಕಾಲೇಜು ಆವರಣದಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
ಸಾಂದರ್ಭಿಕ ಚಿತ್ರ
Edited By:

Updated on: Mar 04, 2024 | 11:52 AM

ಮಂಗಳೂರು, ಮಾರ್ಚ್.04: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆದಿದೆ. ಕಿರಾತಕನೋರ್ವ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಆರೋಪಿ ಅಬಿನ್​ನನ್ನು ಬಂಧಿಸಿದ್ದಾರೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್​ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಹಾಗೂ ಆರೋಪಿ ಅಬಿನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಗುದದಲ್ಲಿ ಬಚ್ಚಿಟ್ಟು 729 ಗ್ರಾಂ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಲು ಕಾರಣವೇನು? ಆ್ಯಸಿಡ್ ಹೇಗೆ ಸಿಕ್ತು. ಇದರ ಹಿಂದೆ ಬೇರೆ ಏನಾದರು ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಆ್ಯಸಿಡ್ ದಾಳಿಗೆ ನಿಖರ ಕಾರಣ ತಿಳಿದು ಬರಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:15 am, Mon, 4 March 24