ಮಂಗಳೂರು: ಕೊರಗಜ್ಜ ಕವಿತೆಗಳಲ್ಲಿನ ಆಕ್ಷೇಪಾರ್ಹ ಪದಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಎಸ್‌ಸಿ/ಎಸ್‌ಟಿ ಕುಂದುಕೊರತೆಗಳ ಪರಿಹಾರ ಸಭೆಯಲ್ಲಿ ದಲಿತ ಮುಖಂಡೆ ಅಮಲಾಜ್ಯೋತಿ ಮಾತನಾಡಿ, ಕರಾವಳಿ ಜಿಲ್ಲೆಗಳ ಜನರು ಪೂಜ್ಯನೀಯವಾಗಿರುವ ಕೊರಗಜ್ಜನನ್ನು ಉಲ್ಲೇಖಿಸುವಾಗ ಆಕ್ಷೇಪಾರ್ಹ ಪದಗಳನ್ನು ಬಳಸಲಾಗುತ್ತಿದೆ ಎಂದು ದೂರಿದರು.

ಮಂಗಳೂರು: ಕೊರಗಜ್ಜ ಕವಿತೆಗಳಲ್ಲಿನ ಆಕ್ಷೇಪಾರ್ಹ ಪದಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಕೊರಗಜ್ಜ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 23, 2023 | 10:51 AM

ಮಂಗಳೂರು ಅ.23: ಕೊರಗಜ್ಜ(Koragajja) ಕವಿತೆಗಳಲ್ಲಿ ಸಮುದಾಯವನ್ನು ಉಲ್ಲೇಖಿಸುವ ಆಕ್ಷೇಪಾರ್ಹ ಪದಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‌ಸಿ/ಎಸ್‌ಟಿ (SC/ST) ಮುಖಂಡರು ಒತ್ತಾಯಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಎಸ್‌ಸಿ/ಎಸ್‌ಟಿ ಕುಂದುಕೊರತೆಗಳ ಪರಿಹಾರ ಸಭೆಯಲ್ಲಿ ದಲಿತ ಮುಖಂಡೆ ಅಮಲಾಜ್ಯೋತಿ ಮಾತನಾಡಿ, ಕರಾವಳಿ ಜಿಲ್ಲೆಗಳ ಜನರು ಪೂಜ್ಯನೀಯವಾಗಿರುವ ಕೊರಗಜ್ಜನನ್ನು ಉಲ್ಲೇಖಿಸುವಾಗ ಆಕ್ಷೇಪಾರ್ಹ ಪದಗಳನ್ನು ಬಳಸಲಾಗುತ್ತಿದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಸಮಸ್ಯೆಯನ್ನು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಗಮನಕ್ಕೆ ತರಲಾಗಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

ದಸರಾ ವೇಶವನ್ನು ಕ್ರಮಬದ್ಧಗೊಳಿಸುವ ಬಗ್ಗೆಯೂ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ದಸರಾ ವೇಶದ ಅಂಗವಾಗಿ ವಿವಿಧ ವೇಶಗಳನ್ನು ಧರಿಸಲು ಮಾಡಲು ಪೊಲೀಸರ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಏಕೆಂದರೆ, ಈ ವೇಶಾಧಾರಿಗಳು ಮನೆ ಮನೆಗೆ ಹಣ ಕೇಳಲು ಹೋಗುತ್ತಾರೆ. ಈ ಸಂದರ್ಭದ ಲಾಭ ಪಡೆಯುವ ಕೆಲವು ದುಷ್ಕರ್ಮಿಗಳು ವೇಶಗಳನ್ನು ಧರಿಸಿ ಮನೆಗಳನ್ನು ದೋಚುತ್ತಾರೆ ಹೀಗಾಗಿ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಎಂದು ದಲಿತ ಮುಖಂಡರು ಹೇಳಿದರು.

ಅಲ್ಲದೇ ಅಂಬೇಡ್ಕರ್ ಭವನದಲ್ಲಿ ಪೀಠೋಪಕರಣ ಕಳ್ಳತನವಾಗಿದೆ ಎಂದು ದಲಿತ ಮುಖಂಡ ಎಸ್ಪಿ ಆನಂದ್ ಗಂಜಿಮಠದ ಹೇಳಿದರು. ಇದಕ್ಕೆ ಆಯುಕ್ತರು ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಭೇಟಿ ನೀಡಲಿದ್ದಾರೆ. ಭವನದ ದುರಸ್ತಿಗೆ ಅನುಕೂಲವಾಗುವಂತೆ ಆಯಾ ಗ್ರಾಮ ಪಂಚಾಯಿತಿಯೊಂದಿಗೆ ಸಮನ್ವಯ ಸಾಧಿಸಿ, ಸದುಪಯೋಗ ಪಡಿಸಿಕೊಳ್ಳುವಂತೆ ಉಪನಿರ್ದೇಶಕರಿಗೆ ತಿಳಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ