AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಜಸ್ಟ್​​ಮೆಂಟ್ ಅಶೋಕ್, ಬಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ: ವಿಪಕ್ಷ ನಾಯಕನಿಗೆ ಪುನೀತ್ ಅತ್ತಾವರ ಎಚ್ಚರಿಕೆ

ಅಧಿವೇಶನದಲ್ಲಿ ಆರ್.ಅಶೋಕ್ ಅವರು ಭಜರಂಗದಳ ಕಾರ್ಯಕರ್ತರ ಬಗ್ಗೆ ನೀಡಿದ ಹೇಳಿಕೆ ಮಂಗಳೂರು ಭಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ಆರ್.ಅಶೋಕ್​ಗೆ ಎಚ್ಚರಿಕೆ ನೀಡಿದ್ದಾರೆ.

ಅಡ್ಜಸ್ಟ್​​ಮೆಂಟ್ ಅಶೋಕ್, ಬಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ: ವಿಪಕ್ಷ ನಾಯಕನಿಗೆ ಪುನೀತ್ ಅತ್ತಾವರ ಎಚ್ಚರಿಕೆ
ಆರ್.ಅಶೋಕ್, ಪುನೀತ್ ಅತ್ತಾವರ
ಅಶೋಕ್​ ಪೂಜಾರಿ
| Edited By: ಆಯೇಷಾ ಬಾನು|

Updated on:Feb 21, 2024 | 10:29 AM

Share

ಮಂಗಳೂರು,ಫೆ.21: ನಾನು ಗೃಹ ಸಚಿವನಾಗಿದ್ದಾಗ ಭಜರಂಗದಳದವರ (Bajrang Dal) ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೊಂಡ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ವಿರುದ್ದ ಭಜರಂಗದಳ ಕಿಡಿಕಾರಿದೆ. ಅಶೋಕ್ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್‌‌.ಅಶೋಕ್​ಗೆ ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ತನ್ನ ಫೇಸ್ ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

‘ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.. ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಭಜರಂಗದಳ ಮುಖಂಡ ಪುನೀತ್ ಫೇಸ್​ಬುಕ್ ಮೂಲಕ ಆರ್.ಅಶೋಕ್​ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಫಲಾನುಭವಿಗಳಿಗೆ ತಲುಪದ ಮಾಸಾಶನ: ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್​ ಅಶೋಕ್​

ಅಧಿವೇಶನದಲ್ಲಿ ಆರ್.ಅಶೋಕ್ ಹೇಳಿದ್ದೇನು?

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ನಡೆದ ಅಧಿವೇಶನದಲ್ಲಿ ಮಂಗಳೂರು ಹಬ್ ದಾಳಿ ಬಗ್ಗೆ ಮಾತನಾಡಿದರು. ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಅವತ್ತು ಭಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಭಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಈಗಿನ ಗೃಹ ಸಚಿವ ಪರಮೇಶ್ವರ್​ಗೆ ಬುದ್ದಿ ಹೇಳೋ ಭರದಲ್ಲಿ ಆರ್.ಅಶೋಕ್ ಮಾತನಾಡಿದ್ದರು. ಸದ್ಯ ಅಶೋಕ್​ ಅವರ ಈ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Wed, 21 February 24

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು