ಮಂಗಳೂರು: ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

ಬೀದರ್​​ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡ ಹಗಲೇ ದರೋಡೆಕೋರರು ಶೂಟ್ ಮಾಡಿ ಹಣ ಸಮೇತ ಪರಾರಿಯಾದ ಘಟನೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿಯೂ ಬ್ಯಾಂಕ್ ದರೋಡೆ ನಡೆದಿದೆ. ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿದ ದರೋಡೆಕೋರರು ನಗದು, ಚಿನ್ನಾಭರಣ ಸಮೇತ ಪರಾರಿಯಾಗಿದ್ದಾರೆ.

ಮಂಗಳೂರು: ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ
ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Jan 17, 2025 | 4:00 PM

ಮಂಗಳೂರು, ಜನವರಿ 17: ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ ನಷ್ಟು ನಾಲ್ಕೈದು ಚೀಲದಲ್ಲಿ ಹಣ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಬೀದರ್​ ಶೂಟೌಟ್ ಆರೋಪಿಗಳಿಗಾಗಿ ತೀವ್ರ ಶೋಧ: ದರೋಡೆಕೋರರು ಹೈದರಾಬಾದ್​ನಲ್ಲೇ ಇರುವ ಶಂಕೆ

ಪೊಲೀಸರೆಲ್ಲ ಸಿಎಂ ಭದ್ರತೆಗೆ ತೆರಳಿದ್ದಾಗ ಘಟನೆ

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್​ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲವು ಯುಟಿ ಖಾದರ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ: ಯುಟಿ ಖಾದರ್

ಬ್ಯಾಂಕ್​ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್​ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್​, ಗನ್​ನಿಂದ ಬೆದರಿಸಿ ಬ್ಯಾಂಕ್​ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:15 pm, Fri, 17 January 25

ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?