AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ಶುರುವಾಯ್ತು ಹಿಜಾಬ್ ಗಲಾಟೆ! ಕೇಸರಿ ಶಾಲು ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಕಾಲೇಜು ಕ್ಯಾಂಪಸ್​ನಲ್ಲಿ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕ್ಯಾಂಪಸ್ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ, ಹಿಜಾಬ್ ಹಾಕಬಾರದೆಂದು ನಿರ್ಧರಿಸಲಾಗಿತ್ತು.

ಮಂಗಳೂರಿನಲ್ಲಿ ಮತ್ತೆ ಶುರುವಾಯ್ತು ಹಿಜಾಬ್ ಗಲಾಟೆ! ಕೇಸರಿ ಶಾಲು ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಕಾಲೇಜು ಕ್ಯಾಂಪಸ್​ನಲ್ಲಿ ಪ್ರತಿಭಟನೆ
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ
TV9 Web
| Edited By: sandhya thejappa|

Updated on:May 26, 2022 | 2:33 PM

Share

ಮಂಗಳೂರು: ರಾಜ್ಯವಲ್ಲ ಇಡೀ ವಿಶ್ವದಲ್ಲೇ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ (Hijab) ಗಲಾಟೆ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್ (High Court) ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್​ಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಅಂತಾ ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕ್ಯಾಂಪಸ್ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ, ಹಿಜಾಬ್ ಹಾಕಬಾರದೆಂದು ನಿರ್ಧರಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಅವಕಾಶ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ
Image
Pak Politics: ಚುನಾವಣೆ ಘೋಷಿಸಲು ಪಾಕಿಸ್ತಾನದ ಹೊಸ ಸರ್ಕಾರಕ್ಕೆ 6 ದಿನಗಳ ಗಡುವು ಕೊಟ್ಟ ಇಮ್ರಾನ್ ಖಾನ್
Image
ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ
Image
Better Sleep: ಹೀಗೆ ಮಾಡಿ, ರಾತ್ರಿ ನಿದ್ರಾದೇವತೆ ನಿಮ್ಮನ್ನು ಸದ್ದಿಲ್ಲದೆ ಹೇಗೆ ಆವರಿಸುತ್ತಾಳೆ ನೋಡಿ
Image
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಇಡಿ ಶಾಕ್! ಹೊಸದಾಗಿ ಚಾರ್ಜ್​ಶೀಟ್ ಸಲ್ಲಿಕೆ

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೋದರ ಡಿಕೆ ಸುರೇಶ್, ಇದು ರಾಜಕೀಯ ಪ್ರೇರಿತ, ಬಿಜೆಪಿಗೆ ಶರಣಾಗುವ ಪ್ರಶ್ನೆಯೇ ಇಲ್ಲ. ಕೋರ್ಟ್ ಮೂಲಕ ಪ್ರತಿ ಪಡೆಯುವಂತೆ ವಕೀಲರಿಗೆ ಸೂಚಿಸುತ್ತೇವೆ ಎಂದರು.

ಇದನ್ನೂ ಓದಿ: ಅಂಧ ವಿದ್ಯಾರ್ಥಿಗಳು, ಪ್ರಿನ್ಸಿಪಲ್ ನಡುವೆ ಜಟಾಪಟಿ! ರಾಯಚೂರಿನಲ್ಲಿ ವಿಶೇಷ ಚೇತನರ ಸಂಘದಿಂದ ಕಾಲೇಜು ಪ್ರಿನ್ಸಿಪಲ್​ಗೆ ತರಾಟೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ, ಕಾಲೇಜು ಆವರಣದಲ್ಲಿ ಹಿಜಾಬ್‌ ನಿಷೇಧಿಸಿ ಆದೇಶ ಹೊರಡಿಸಿದೆ. ಸಮವಸ್ತ್ರ ಹೊರತುಪಡಿಸಿ ಯಾವುದೇ ಉಡುಪು ಧರಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಹಿಜಾಬ್ ಹಾಕಲೇಬಾರದು ಅಂತಾ ಕೋರ್ಟ್ ಹೇಳಿಲ್ಲ- ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ: ಸಂವಿಧಾನ ಮತ್ತು ಕಾನೂನು ಗೌರವಿಸುವವರು ಹಿಜಾಬ್ ತೆಗೆದು ತರಗತಿಗೆ ಬರಲು ಆರಂಭಿಸಿದ್ದಾರೆ. ಗೊಂದಲ ಸೃಷ್ಟಿಸಬೇಕು ಅಂತಾ ಉದ್ದೇಶ ಇರುವವರು ಇಂತಹ ಕೃತ್ಯ ಮಾಡುತ್ತಾರೆ. ಹೈಕೋರ್ಟ್ ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಹೈಕೋರ್ಟ್ ಆದೇಶ ಪಾಲನೆ ಮಾಡದಿದ್ದರೆ ಅದು ಕಾನೂನು ಬಾಹಿರ ಆಗುತ್ತದೆ. ಕರಾವಳಿ ಭಾಗದಲ್ಲಿ ಕೆಲವರ ಕುಮ್ಮಕ್ಕಿನಿಂದ ಇದು ಆಗುತ್ತಿದೆ. ಹಿಜಾಬ್ ಹಾಕಲೇಬಾರದು ಅಂತಾ ಕೋರ್ಟ್ ಹೇಳಿಲ್ಲ. ತರಗತಿಯಲ್ಲಿ ಧಾರ್ಮಿಕ ವಸ್ತ್ರ ಬೇಡ ಅಂತಾ ಕೋರ್ಟ್ ಹೇಳಿದೆ. ವಿವಾದವನ್ನು ಈ ವರ್ಷವೂ ಮುಂದುವರಿಸುವುದು ಒಳ್ಳೆಯದಲ್ಲ ಎಂದು ಟಿವಿ9ಗೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Thu, 26 May 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ