ಮಂಗಳೂರು: ರಾಜ್ಯವಲ್ಲ ಇಡೀ ವಿಶ್ವದಲ್ಲೇ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ (Hijab) ಗಲಾಟೆ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್ (High Court) ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್ಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಅಂತಾ ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕ್ಯಾಂಪಸ್ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ, ಹಿಜಾಬ್ ಹಾಕಬಾರದೆಂದು ನಿರ್ಧರಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಅವಕಾಶ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೋದರ ಡಿಕೆ ಸುರೇಶ್, ಇದು ರಾಜಕೀಯ ಪ್ರೇರಿತ, ಬಿಜೆಪಿಗೆ ಶರಣಾಗುವ ಪ್ರಶ್ನೆಯೇ ಇಲ್ಲ. ಕೋರ್ಟ್ ಮೂಲಕ ಪ್ರತಿ ಪಡೆಯುವಂತೆ ವಕೀಲರಿಗೆ ಸೂಚಿಸುತ್ತೇವೆ ಎಂದರು.
Karnataka | Students of University College, Mangalore protest against the college administration for not implementing the Hijab rule. pic.twitter.com/kPSCM6gfqP
— ANI (@ANI) May 26, 2022
ಇದನ್ನೂ ಓದಿ: ಅಂಧ ವಿದ್ಯಾರ್ಥಿಗಳು, ಪ್ರಿನ್ಸಿಪಲ್ ನಡುವೆ ಜಟಾಪಟಿ! ರಾಯಚೂರಿನಲ್ಲಿ ವಿಶೇಷ ಚೇತನರ ಸಂಘದಿಂದ ಕಾಲೇಜು ಪ್ರಿನ್ಸಿಪಲ್ಗೆ ತರಾಟೆ
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ:
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ, ಕಾಲೇಜು ಆವರಣದಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿದೆ. ಸಮವಸ್ತ್ರ ಹೊರತುಪಡಿಸಿ ಯಾವುದೇ ಉಡುಪು ಧರಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಹಿಜಾಬ್ ಹಾಕಲೇಬಾರದು ಅಂತಾ ಕೋರ್ಟ್ ಹೇಳಿಲ್ಲ- ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ:
ಸಂವಿಧಾನ ಮತ್ತು ಕಾನೂನು ಗೌರವಿಸುವವರು ಹಿಜಾಬ್ ತೆಗೆದು ತರಗತಿಗೆ ಬರಲು ಆರಂಭಿಸಿದ್ದಾರೆ. ಗೊಂದಲ ಸೃಷ್ಟಿಸಬೇಕು ಅಂತಾ ಉದ್ದೇಶ ಇರುವವರು ಇಂತಹ ಕೃತ್ಯ ಮಾಡುತ್ತಾರೆ. ಹೈಕೋರ್ಟ್ ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಹೈಕೋರ್ಟ್ ಆದೇಶ ಪಾಲನೆ ಮಾಡದಿದ್ದರೆ ಅದು ಕಾನೂನು ಬಾಹಿರ ಆಗುತ್ತದೆ. ಕರಾವಳಿ ಭಾಗದಲ್ಲಿ ಕೆಲವರ ಕುಮ್ಮಕ್ಕಿನಿಂದ ಇದು ಆಗುತ್ತಿದೆ. ಹಿಜಾಬ್ ಹಾಕಲೇಬಾರದು ಅಂತಾ ಕೋರ್ಟ್ ಹೇಳಿಲ್ಲ. ತರಗತಿಯಲ್ಲಿ ಧಾರ್ಮಿಕ ವಸ್ತ್ರ ಬೇಡ ಅಂತಾ ಕೋರ್ಟ್ ಹೇಳಿದೆ. ವಿವಾದವನ್ನು ಈ ವರ್ಷವೂ ಮುಂದುವರಿಸುವುದು ಒಳ್ಳೆಯದಲ್ಲ ಎಂದು ಟಿವಿ9ಗೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದರು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:42 pm, Thu, 26 May 22