ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು

ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ(Dr. Bharath Shetty Y) ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ಗೆ ದೂರು ನೀಡಲಾಗಿದೆ. ಎಂಎಲ್​ಸಿ ಐವನ್ ಡಿಸೋಜಾ(Ivan D'Souza) ನೇತೃತ್ವದ ನಿಯೋಗ ಇಂದು (ಮಂಗಳವಾರ) ಕಮಿಷನರ್ ಅವರನ್ನು ಭೇಟಿಯಾಗಿ ಶಾಸಕರನ್ನು ಬಂಧಿಸಲು ಒತ್ತಾಯಿಸಿದರು.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು
ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 09, 2024 | 3:40 PM

ದಕ್ಷಿಣ ಕನ್ನಡ, ಜು.09: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ(Dr. Bharath Shetty Y) ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ಗೆ ದೂರು ನೀಡಲಾಗಿದೆ. ಎಂಎಲ್​ಸಿ ಐವನ್ ಡಿಸೋಜಾ(Ivan D’Souza) ನೇತೃತ್ವದ ನಿಯೋಗ, ಇಂದು(ಜು.09) ಕಮಿಷನರ್ ಅವರನ್ನು ಭೇಟಿಯಾಗಿ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್‌ ದಾಖಲಿಸಿ ಬಂಧಿಸಲು ಒತ್ತಾಯಿಸಿದರು.

ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಐವನ್ ಡಿಸೋಜಾ ನೇತೃತ್ವದ ನಿಯೋಗ ಭರತ್ ಶೆಟ್ಟಿ ಅವರನ್ನು ಬಂಧಿಸಲು ಕಮಿಷನರ್​ಗೆ ದೂರು ನೀಡಿದೆ.

ಇದನ್ನೂ ಓದಿ:ರಾಹುಲ್ ಗಾಂಧಿ ದೊಡ್ಡ ಹುಚ್ಚ, ಪಾರ್ಲಿಮೆಂಟ್​ಗೆ ಹೋಗಿ ಅವನ ಕೆನ್ನೆಗೆ ಬಾರಿಸಬೇಕು: ಭರತ್ ಶೆಟ್ಟಿ ಹೇಳಿಕೆಗೆ ವ್ಯಾಪಕ ವಿರೋಧ

ಘಟನೆ ವಿವರ

ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನಾ ಸಭೆಯಲ್ಲಿ ಕಿಡಿಕಾರಿದ್ದರು. ‘ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅವನು ಅಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ. ‘ಬಾಯಿಗೆ ಬಂದ ಹಾಗೆ ರಾಹುಲ್ ಗಾಂಧಿ ಬೊಗಳುತ್ತಿದ್ದಾನೆ. ಆತ ದೊಡ್ಡ ಹುಚ್ಚ, ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದಿದ್ದರು. ಈ ಹೇಳಿಕೆ ವಿರುದ್ದ ಇದೀಗ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ