Police Raid: ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ; ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ!

|

Updated on: Apr 02, 2023 | 3:27 PM

ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ.

Police Raid: ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ; ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ!
ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ
Follow us on

ಮಂಗಳೂರು: ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ (Dakshina Kannada Dirstrict Prison) ಮೇಲೆ ಪೊಲೀಸರ ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದು, ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದ್ದು, ದಾಳಿಯ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆ ವ್ಯಕ್ತವಾಗಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ನಿರ್ಧರಿಸಿರುವ ಪೊಲೀಸರು, ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದ್ದು, ಡಿಸಿಪಿ, ಎಸಿಪಿ, ಇನ್​ಸ್ಪೆಕ್ಟರ್, ಪಿಎಸ್​ಐ ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಬಳಿಕ ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್​​​ ಜೈನ್, ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದೇವೆ. ಆದರೆ ತಪಾಸಣೆ ವೇಳೆ ಬೀಡಿ, ಸಿಗರೇಟ್​​, ತಂಬಾಕು ಬಿಟ್ಟು ಬೇರೇನು ಸಿಕ್ಕಿಲ್ಲ. ಮುಂದಿನ ದಿನಗಳಲ್ಲೂ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತ ಎಂದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 300 ಮಂದಿ ಪ್ಲ್ಯಾನ್ ಮಾಡಿ ದಾಳಿ ನಡೆಸಿದ್ದೇವೆ. ಜೈಲು ಅಧಿಕಾರಿಗಳು ಜೈಲಿಗೆ ಎಂಟ್ರಿಯಾಗುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸುತ್ತಿದ್ದಾರೆ. ತಪಾಸಣೆ ನಡೆಸುವಾಗ ಬೀಡಿ ಸಿಗರೇಟ್ ತಂಬಾಕು ಬಿಟ್ಟು ಬೇರೆನೂ ಸಿಕ್ಕಿಲ್ಲ. ವಿಚಾರಾಧೀನ ಕೈದಿಗಳನ್ನು ಭೇಟಿ ಮಾಡಲು ಬರುವ ಸಂದರ್ಭದಲ್ಲಿ ಕೆಲವರು ಬೀಡಿ ಸಿಗರೇಟ್ ಕೊಡುತ್ತಾರೆ. ಆದರೆ ತಿಳಿದುಬಂದ ಅಕ್ರಮ ಚಟುವಟಿಕೆ ಮಾಹಿತಿ ಸಂಬಂಧ ಯಾವುದೇ ಪೂರಕ ಸಾಕ್ಷ್ಯಗಳು ಸಿಕ್ಕಿಲ್ಲ. ಕಾಲ ಕಾಲಕ್ಕೆ ತಪಾಸಣೆ ನಡೆಸುತ್ತಿದ್ದರೆ ಅಕ್ರಮಕ್ಕೆ ಕಡಿವಾಣ ಬೀಳುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿಯೂ ತಪಾಸಣೆ ಮುಂದುವರಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Sun, 2 April 23