Mangalore Blast: ದೊಡ್ಡ ಆನಾಹುತ ಸ್ವಲ್ಪದರಲ್ಲಿ ತಪ್ಪಿದೆ, ದೇವರಿಗೊಂದು ಥ್ಯಾಂಕ್ಸ್​; ಅಲೋಕ್ ಕುಮಾರ್

ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

Mangalore Blast: ದೊಡ್ಡ ಆನಾಹುತ ಸ್ವಲ್ಪದರಲ್ಲಿ ತಪ್ಪಿದೆ, ದೇವರಿಗೊಂದು ಥ್ಯಾಂಕ್ಸ್​; ಅಲೋಕ್ ಕುಮಾರ್
ಅಲೋಕ್ ಕುಮಾರ್, ಎಡಿಜಿಪಿ
Follow us
TV9 Web
| Updated By: ಆಯೇಷಾ ಬಾನು

Updated on:Nov 21, 2022 | 12:36 PM

ಮಂಗಳೂರು: ಈಗ ಒಂದು ದೊಡ್ಡ ಅನಾಹುತ ತಪ್ಪಿದೆ ಅನ್ನೋ ನೆಮ್ಮದಿ ಇದೆ. ಬಾಂಬ್ ಬ್ಲಾಸ್ಟ್ ಆಗಿದ್ದರೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗ್ತಾ ಇತ್ತು. ಆದರೆ ಆ ವಿಚಾರದಲ್ಲಿ ದೇವರಿಗೆ ಧನ್ಯವಾದ ಸಲ್ಲಿಸಲೇ ಬೇಕು ಎಂದು ಸುದ್ದಿಗೋಷ್ಠಿ ವೇಳೆ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ(Mangalore Blast) ಸಂಬಂಧಿಸಿ ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್(Alok Kumar) ಸುದ್ದಿಗೋಷ್ಠಿ ನಡೆಸಿದ್ದಾರೆ.

ನವೆಂಬರ್ 19ರಂದು ಸಂಜೆ 4.40ರಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕ, ಆಟೋ ಚಾಲಕನಿಗೆ ಗಾಯಗಳಾಗಿವೆ. ತಕ್ಷಣ ಪೊಲೀಸ್ ಅಧಿಕಾರಿಗಳಿಂದ ಗುರುತು ಪತ್ತೆ ಮಾಡುವ ಕೆಲಸ ನಡೆದಿದ್ದು ಆರೋಪಿ ಬಳಿ ಪ್ರೇಮರಾಜ್​ ಎಂಬ ಹೆಸರಿನ ಐಡಿ ಸಿಕ್ಕಿತ್ತು. ನಾನೇ ಪ್ರೇಮರಾಜ್​ ಎಂಬಾತನ ಜೊತೆ ಮಾತನಾಡಿದ್ದೇನೆ. ತಕ್ಷಣ ಪೊಲೀಸರಿಗೆ ತಿಳಿಸಲು ಪ್ರೇಮರಾಜ್​ಗೆ ಹೇಳಿದ್ದೆ. ಶಾರಿಕ್​ ಸಂಬಂಧಿಕರು ಬಂದು ಗುರುತು ಪತ್ತೆ ಹಚ್ಚಿದ್ದಾರೆ. ಈತ ಮೋಹನ್​ ಕುಮಾರ್​ ಎಂಬುವರ ಮನೆಯಲ್ಲಿ ವಾಸವಿದ್ದ. ಶಂಕಿತ ವಾಸವಿದ್ದ ಮನೆಯಲ್ಲಿ ಹಲವು ಸ್ಫೋಟಕ ವಸ್ತುಗಳು ಸಿಕ್ಕಿವೆ. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ಫೇಕ್ ಐಡಿ ಪಡೆದು ಕೊಯಮತ್ತೂರಲ್ಲೂ ವಾಸವಿದ್ದ ಎಂದು ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು.

ಇದನ್ನೂ ಓದಿ: Mangalore Blast: ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಮೈಸೂರಿನಲ್ಲಿ ತರಬೇತಿ ಪಡೆದಿದ್ದ ಶಾರಿಕ್​ನಿಂದ ಶಿವಮೊಗ್ಗದ ತುಂಗಾ ತೀರದಲ್ಲಿ ರಿಹರ್ಸಲ್

ಫಂಡಿಂಗ್ ಮಾಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದೇವೆ. ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಆಗಸ್ಟ್ 15,2022 ರ ಶಿವಮೊಗ್ಗ ಗಲಾಟೆ ಬಳಿಕ ಅಲರ್ಟ್ ಆಗಿದ್ದ. ಅವನು ಅಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲಾ ಸುತ್ತಾಡಿ ಮೈಸೂರು ಬಂದಿದ್ದ. ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡ್ತಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತ ಗೊತ್ತಾಯ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ.

2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಕೇಸ್ ಆಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. A1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದಾರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಯ್ತು. ಮುನೀರ್ ಬಂಧನ ಬಳಿಕ ಶಾಕೀರ ಟ್ರಾಯಲ್ ಬ್ಲಾಸ್ಟ್ ‌ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕ ಮೋಹನ್ ಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರು ಬಂದಿದ್ದಾನೆ. ಅಲ್ಲಿ ನಾಗುರಿ ಇಳಿದು ಅವನ ಟಾರ್ಗೆಟ್ ಜಾಗಕ್ಕೆ ಹೋಗ್ತಾ ಇದ್ದ. ಆದರೆ ಅವನು ಎಲ್ಲಿಗೆ ಹೋಗ್ತಾ ಇದ್ದ ಅನ್ನೋದು ಗೊತ್ತಾಗಿಲ್ಲ. ಅವನು ಗುಣಮುಖವಾದ ಬಳಿಕ ವಿಚಾರಣೆಯಲ್ಲಿ ಗೊತ್ತಾಗುತ್ತೆ. ವಾರದ ಹಿಂದೆ ಒಮ್ಮೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದಾನೆ. ಮೈಸೂರಿನಿಂದ ಇಬ್ಬರು ಹಾಗೂ ಮಂಗಳೂರಿನ ಒಬ್ಬರನ್ನ ಪ್ರಕರಣ ಸಂಬಂಧ ವಶಕ್ಕೆ ಪಡೆಯಲಾಗಿದೆ. ಇವನು ವಿದೇಶದ ಒಂದು ಉಗ್ರ ಸಂಘಟನೆಯ ಪ್ರಭಾವಕ್ಕೆ ಒಳಗಾಗಿದ್ದ ಎಂಬುವುದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಾಂಬ್ ಸ್ಫೋಟ ಘಟನೆಯಲ್ಲಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನ ಗುರುತು ಪತ್ತೆ

ತೀರ್ಥಹಳ್ಳಿಯ ಅಬ್ದುಲ್ ‌ಮತೀನ್ ತಾಹಾ ಇದರ ಮೈನ್ ಹ್ಯಾಂಡ್ಲರ್ ಆಗಿದ್ದಾನೆ. ಅವನು ತಲೆಮರೆಸಿಕೊಂಡಿದ್ದು, ಎನ್​ಐಎ ಎರಡು ಲಕ್ಷ ರಿವಾರ್ಡ್ ಘೋಷಣೆ ಮಾಡಿದೆ. ಈಗ ಒಂದು ದೊಡ್ಡ ಅನಾಹುತ ತಪ್ಪಿದೆ ಅನ್ನೋ ನೆಮ್ಮದಿ ಇದೆ. ಬಾಂಬ್ ಬ್ಲಾಸ್ಟ್ ಆಗಿದ್ದರೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗ್ತಾ ಇತ್ತು. ಆದರೆ ಆ ವಿಚಾರದಲ್ಲಿ ದೇವರಿಗೆ ಧನ್ಯವಾದ ಸಲ್ಲಿಸಲೇ ಬೇಕು. ಸದ್ಯ ಅವನಿಗೆ ಚಿಕಿತ್ಸೆ ಆಗ್ತಿದೆ, ಅವನು ಗುಣಮುಖನಾದ ಬಳಿಕ ವಿಚಾರಣೆ ನಡೆಸ್ತೇವೆ. ಚಾಲಕ ಪುರುಷೋತ್ತಮ್ ಪೂಜಾರಿಗೆ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಲು ಯತ್ನಿಸ್ತೇವೆ. ಅವರ ಸಂಬಂಧಿಕರ ಸಮಸ್ಯೆಗೂ ನಾವು ಸ್ಪಂದನೆ ಕೊಡ್ತೇವೆ. ಮಂಗಳೂರು ‌ಮತ್ತು ಮೈಸೂರು ಪೊಲೀಸ್ ಆಯುಕ್ತರ ತನಿಖೆ ಮುಂದುವರೆಯುತ್ತದೆ ಎಂದರು.

Published On - 12:25 pm, Mon, 21 November 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ