Amit Shah: ಫೆ.11 ದಕ್ಷಿಣ ಕನ್ನಡಕ್ಕೆ ಅಮಿತ್​ ಶಾ ಭೇಟಿ; ಹನುಮಗಿರಿ-ಪುತ್ತೂರಿನವರೆಗು ಪೊಲೀಸ್​​​ ಹೈ ಅಲರ್ಟ್

| Updated By: ವಿವೇಕ ಬಿರಾದಾರ

Updated on: Feb 10, 2023 | 1:40 PM

ಬಿಜೆಪಿ ಮತಗಳ ಭದ್ರಕೋಟೆ ದಕ್ಷಿಣ ಕನ್ನಡಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಾಳೆ (ಫೆ.11) ಕ್ಕೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಲಿದ್ದಾರೆ.

Amit Shah: ಫೆ.11 ದಕ್ಷಿಣ ಕನ್ನಡಕ್ಕೆ ಅಮಿತ್​ ಶಾ ಭೇಟಿ; ಹನುಮಗಿರಿ-ಪುತ್ತೂರಿನವರೆಗು ಪೊಲೀಸ್​​​ ಹೈ ಅಲರ್ಟ್
ಕೇಂದ್ರ ಗೃಹ ಸಚಿವ ಅಮಿತ್​ ಶಾ
Follow us on

ಮಂಗಳೂರು: ಬಿಜೆಪಿ ಮತಗಳ ಭದ್ರಕೋಟೆ ದಕ್ಷಿಣ ಕನ್ನಡಕ್ಕೆ (Dakshina Kannada) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ನಾಳೆ (ಫೆ.11) ಕ್ಕೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಹನುಮಗಿರಿಯ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಓರ್ವ ಎಸ್​ಪಿ, 5 ಡಿವೈಎಸ್​ಪಿ, 10 ಇನ್ಸ್​​ಪೆಕ್ಟರ್​ಗಳು, 15 ಪಿಎಸ್​ಐ, 500ಕ್ಕೂ ಹೆಚ್ಚು ಕಾನ್ಸ್​​ಟೇಬಲ್​ಗಳ ನಿಯೋಜನೆ ಮಾಡಲಾಗಿದೆ. ಹನುಮಗಿರಿಯಲ್ಲಿರುವ ಗಜಾನನ ಶಾಲೆಯ ಮೈದಾನದ ಹೆಲಿಪ್ಯಾಡ್​ಗೆ ಅಮಿತ್​ ಶಾ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ನಂತರ ಭಾರತ ಮಾತಾ ಮಂದಿರ ಉದ್ಘಾಟಿಸಲಿದ್ದಾರೆ.

ಅಮಿತ್ ಶಾ ಮಂಗಳೂರು ಭೇಟಿ ವೇಳಾಪಟ್ಟಿ

ಫೆಬ್ರುವರಿ 11, ಶನಿವಾರ ಮಧ್ಯಾಹ್ನ 2.15 ಕಣ್ಣೂರು ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ. ಮಧ್ಯಾಹ್ನ 2.45 ಕಣ್ಣೂರಿನಿಂದ ಬಿಎಸ್ಎಫ್‌ ಹೆಲಿಕಾಪ್ಟರ್‌ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮನ. ಮಧ್ಯಾಹ್ನ 2.50 ಈಶ್ವರಮಂಗಲ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ಮಧ್ಯಾಹ್ನ 3.35 ಹೆಲಿಕಾಪ್ಟರ್‌ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮನ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿ ಸಂಜೆ 6.00: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ ಸಂಜೆ 6:15 ರಿಂದ 8:00 : ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಆಂತರಿಕ ಸಭೆ ರಾತ್ರಿ 8:15 ಮಂಗಳೂರು ಏರ್​ಪೋರ್ಟ್​ನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ಕೊರಗಜ್ಜನ ಕೋಲ ಹಿನ್ನೆಲೆ ರದ್ದಾಯ್ತು ಮಂಗಳೂರು ರೋಡ್​ ಶೋ..!

ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದ ನೆಪದಲ್ಲಿ ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ಕಾರ್ಯವನ್ನು ನಡೆಸಬೇಕು ಅನ್ನೋದು ಬಿಜೆಪಿ ಪ್ಲಾನ್ ಆಗಿತ್ತು. ಹೀಗಾಗಿ ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಭಾಷಣ ಮಾಡಿದ ಬಳಿಕ ಅಮಿತ್ ಶಾ ಮಂಗಳೂರಿನಲ್ಲಿ ಬೃಹತ್ ರೋಡ್ ಶೋನಲ್ಲಿ ಭಾಗಿಯಾಗುವವರಿದ್ದರು. ಆದರೆ ರೋಡ್ ಶೋ ಮಾರ್ಗ ಮಧ್ಯದಲ್ಲಿಯೇ ಬರುವ ಪದವಿನಂಗಡಿಯಲ್ಲಿ ಕೊರಗಜ್ಜನ ಕೋಲ ನಡೆಯುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದುಗೊಳಿಸಲಾಗಿದೆ.

2018ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಬರೋಬ್ಬರಿ 7 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ತನ್ನ ಹಾಲಿ ಕ್ಷೇತ್ರಗಳನ್ನು ಉಳಿಸಿಕೊಳ್ಳೋಕೆ ಇನ್ನಿಲ್ಲದ ಸರ್ಕಸ್ ಮಾಡ್ತಿದೆ. ಹೇಗಾದರೂ ಮಾಡಿ ತನ್ನ ಭದ್ರಕೋಟೆ ಛಿದ್ರವಾಗದಂತೆ ನೋಡಿಕೊಳ್ಳುವ ಒತ್ತಡ ಕೂಡ ಬಿಜೆಪಿ ಮೇಲೆ ಇರೋದ್ರಿಂದ ಅಮಿತ್ ಶಾ ಕರಾವಳಿ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ