‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ

ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ.

‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ
ಅಪರಿಚಿತ ತಂಡದಿಂದ ಮನೆಗೆ ಭೇಟಿ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 22, 2023 | 3:59 PM

ದಕ್ಷಿಣ ಕನ್ನಡ, ನ.22: ನಕ್ಸಲ್​(Naxal) ಪೀಡಿತ ಪ್ರದೇಶವಾದ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕುತ್ಲೂರು ಗ್ರಾಮದ ಒಂಟಿ ಮನೆಯೊಂದರ ಬಾಗಿಲನ್ನು ನಿನ್ನೆ(ನ.21) ರಾತ್ರಿ ಐದು ಜನ ಅಪರಿಚಿತರ ತಂಡ ತಟ್ಟಿದ ಘಟನೆ ನಡೆದಿದೆ. ಇದು ಬಹಳ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ‘ಜಮೀನು ರಿಜಿಸ್ಟರ್ ವಿಚಾರದಲ್ಲಿ ಹಣದ ವ್ಯತ್ಯಾಸದಿಂದ ದೂರು ಹಿನ್ನಲೆ ಆರೋಪಿ ಬೆಳಗ್ಗೆ ಸಿಗಲ್ಲವೆಂದು ರಾತ್ರಿಯೇ ಮೂಡಬಿದ್ರೆ ಪೊಲೀಸರು ಹಣ ವಂಚನೆ ವಿಚಾರದಲ್ಲಿ ಇಬ್ಬರು ಹೆಡ್ ಕಾನ್ಸ್‌ಟೇಬಲ್, ಓರ್ವ ಮಹಿಳಾ ಪೊಲೀಸ್, ಓರ್ವ ದೂರುದಾರರು ಹೋಗಿದ್ದಾರೆ. ಬಳಿಕ ಪೊಲೀಸರು ಎಂದು ಆತನಿಗೆ ನಿನ್ನೆ ರಾತ್ರಿಯೇ ಅರಿವು ಮಾಡಲಾಗಿದೆ. ಆದ್ರೂ ನಕ್ಸಲ್ ಎಂದು ಮನೆ ಮಾಲೀಕ ಜೋಸ್ಸಿ ಆಂಟನಿ ನಾಟಕವಾಡಿದ್ದಾನೆ ಎಂದರು.

 ನಕ್ಸಲ್ ಎಂದು ನಾಟಕವಾಡಿರೋ ಮನೆ ಮಾಲೀಕ

ಅದರಲ್ಲಿ ನಾಲ್ವರು ಪುರುಷರು ನೀಲಿ ಬಣ್ಣದ ಬಟ್ಟೆ ಧರಿಸಿದ್ದರೆ, ಓರ್ವ ಮಹಿಳೆ ಖಾಕಿ ಬಟ್ಟೆ ಧರಿಸಿ, ಕೈಯಲ್ಲಿ ಮಾರಕಸ್ತ್ರಗಳನ್ನು ಹಿಡಿದು ಬಂದಿದ್ದರಂತೆ. ಜೊತೆಗೆ ಮನೆಯ ಬಾಗಿಲನ್ನು ತೆಗೆಯದೇ ಇದ್ದಾಗ, ಹಾರೆಯಲ್ಲಿ ಮೀಟಿ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾಗಿ ಮನೆ ನಿವಾಸಿ ಜೋಸಿ ಆಂಟನಿ ಹೇಳಿದ್ದರು.

ಇದನ್ನೂ ಓದಿ:ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?

ಇನ್ನು ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ. ಬಂದಿದ್ದವರು ನಕ್ಸಲರು ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 22 November 23

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್