ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು

ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
ಕಾಲು ಜಾರಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದಿದ್ದ ಅಡುಗೆ ಸಹಾಯಕಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 14, 2022 | 9:10 PM

ಮಂಗಳೂರು: ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಹಾಯಕಿ ಸಾವನ್ನಪ್ಪಿದ್ದಾರೆ. ಅಗ್ನೇಸ್ ಪ್ರಮೀಳಾ ಡಿಸೋಜಾ (37) ಸಾವಿಗೀಡಾದ ದುರ್ದೈವಿ. ಪ್ರಮೀಳಾ ಡಿಸೋಜಾ ಅವರು ಮೇ 30 ರಂದು ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದರು. ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು.ಪ್ರಮೀಳಾರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಇವರು ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಯುವತಿ ದುರ್ಮರಣ:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಮಲ್ಲಾ(ಬಿ) ಗ್ರಾಮದಲ್ಲಿ ಸಿಡಿಲು ಬಡಿದು ಯುವತಿ ದುರ್ಮರಣಕ್ಕೀಡಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ವಿದ್ಯಾಶ್ರೀ ಮೃತಪಟ್ಟ ದುರ್ದೈವಿ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಡುಗೆ ಅನಿಲ ಸೋರಿಕೆಯಾಗಿ ಹೊತ್ತಿ ಉರಿದ ಸಿಲಿಂಡರ್, ಮಹಿಳೆಗೆ ಗಂಭೀರ ಗಾಯ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ವೇಳೆ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಹೊತ್ತಿ ಉರಿದಿದೆ. ಇದರಿಂದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ಜಗದೀಶ್ ಬಾಣಗಿ ಎಂಬುವರ ಮನೆಯಲ್ಲಿ ಈ ಆಕಸ್ಮಿಕ ಘಟ‌ನೆ ನಡೆದಿದೆ. 47 ವರ್ಷದ ನಾರು ಡೆಗೆ ಎಂಬುವರ ಕೈ, ಕಾಲು, ಹೊಟ್ಟೆ, ಮುಖಕ್ಕೆ ಸುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಅಫಜಲಪುರ ಬಿಇಒ ದೇಶಮುಖ್ ಎಸಿಬಿ ಬಲೆಗೆ

ಕಲಬುರಗಿ ಜಿಲ್ಲೆ ಅಫಜಲಪುರ ಬಿಇಒ ದೇಶಮುಖ್ ಕಲಬುರಗಿಯ ಹೋಟೆಲ್ ಬಳಿ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಹೇರೂರ್ ಗ್ರಾಮದ ಅನುದಾನಿತ ಶಾಲೆಯ ಸಿಬ್ಬಂದಿಗೆ ಸಂಬಳ ನೀಡಲು ಶ್ರೀಯುತರು ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಹೆಡ್ ಮಾಸ್ಟರ್ ರಾಜಶೇಖರ್ ಖಿಲಾರಿ ಎಂಬುವವರ ಬಳಿ ದೇಶಮುಖ್ ಲಂಚ ಸ್ವೀಕರಿಸುತ್ತಿದ್ದ. ಎರಡು ತಿಂಗಳ ಅವಧಿಗೆ ಆರು ಲಕ್ಷ ರೂಪಾಯಿ ಸ್ಯಾಲರಿ ಮಾಡೋದಕ್ಕೆ ಆರೋಪಿ ದೇಶಮುಖ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅಫಜಲಪುರದಿಂದ ಬಂದು ಕಲಬುರಗಿಯ ಹೊಟೇಲ್ ಬಳಿ 15 ಸಾವಿರ ಹಣ ಪಡೆಯುವಾಗ ಎಸಿಬಿ ಬಲೆಗೆ ದೇಶಮುಖ್ ಸಿಕ್ಕಿಬಿದ್ದಿದ್ದಾನೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ: ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ

Published On - 8:57 pm, Tue, 14 June 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ