ಸ್ನೇಹಮಯಿ ಕೃಷ್ಣ ಫೋಟೋಗೆ ರಕ್ತಾಭಿಷೇಕ: ಬಲಿ ಚೀಟಿಯಲ್ಲಿ ಮಹಿಳಾ PSI ಹೆಸರು ಪತ್ತೆ

ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ರಕ್ತಾಭಿಷೇಕ ಮತ್ತು ಮದ್ಯದ ಅಭಿಷೇಕ ಮಾಡಿರುವ ವಿಡಿಯೋ ಪತ್ತೆ ಆಗಿದೆ. ಈ ವಿಡಿಯೋ ಬಂಧಿತ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್​​ನಲ್ಲಿ ಪತ್ತೆಯಾಗಿರುವುದು ಪೊಲೀಸ್​ ವಿಚಾರಣೆಯಲ್ಲಿ ಬಯಲಾಗಿದೆ. ಆದರೆ ಸ್ನೇಹಮಯಿ ಕೃಷ್ಣ, ಗಂಗರಾಜುರೊಂದಿಗೆ ಪ್ರಸಾದ್ ಅತ್ತಾವರ ಪತ್ನಿ ಸುಮಾ ಆಚಾರ್ಯ ಹೆಸರು ಕೂಡ ಬಲಿ ಚೀಟಿಯಲ್ಲಿರುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

ಸ್ನೇಹಮಯಿ ಕೃಷ್ಣ ಫೋಟೋಗೆ ರಕ್ತಾಭಿಷೇಕ: ಬಲಿ ಚೀಟಿಯಲ್ಲಿ ಮಹಿಳಾ PSI ಹೆಸರು ಪತ್ತೆ
ಸ್ನೇಹಮಯಿ ಕೃಷ್ಣ ಫೋಟೋಗೆ ರಕ್ತಾಭಿಷೇಕ: ಬಲಿ ಚೀಟಿಯಲ್ಲಿ ಮಹಿಳಾ PSI ಹೆಸರು ಪತ್ತೆ
Edited By:

Updated on: Jan 31, 2025 | 5:32 PM

ಮಂಗಳೂರು, ಜನವರಿ 31: ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪತ್ತೆ ಆಗಿತ್ತು. ಇದೀಗ ಅದೇ ಬಲಿ ಚೀಟಿಯಲ್ಲಿ ಪ್ರಸಾದ್ ಅತ್ತಾವರ (Prasad Attavar) ಪತ್ನಿ, ಉಡುಪಿ ಮಹಿಳಾ ಠಾಣೆಯ ಪಿಎಸ್‌ಐಯಾಗಿರುವ ಸುಮಾ ಆಚಾರ್ಯ ಹೆಸರು ಕೂಡ ಇರುವುದು ಸದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮಂಗಳೂರಿನ ಸ್ಪಾ ಮತ್ತು ಪಾರ್ಲರ್ ಮೇಲಿನ ದಾಳಿ ಕೇಸ್‌ನಲ್ಲಿ ಒಂದು ವಾರದ ಹಿಂದೆ ರಾಮಸೇನಾ ಮುಖ್ಯಸ್ಥ ಪ್ರಸಾದ್‌ ಅತ್ತಾವರ್‌ ಬಂಧನವಾಗಿತ್ತು. ಪೊಲೀಸರು ಅತ್ತಾವರ ಮೊಬೈಲ್ ಫೋನ್ ಪರಿಶೀಲಿಸುತ್ತಿದ್ದಾಗ, ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜುಗೆ ಬಲ ತುಂಬಲು 5 ಕುರಿಗಳನ್ನು ದೇವಿಗೆ ಬಲಿ ಕೊಟ್ಟಿರೋ ವಿಡಿಯೋ ಬಯಾಲಾಗಿದೆ.

ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದ್ದಿಷ್ಟು

ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯಿಸಿದ್ದು, ಒಂದು ವಾರದ ಹಿಂದೆ ಪ್ರಸಾದ್ ಅತ್ತಾವರ ಬಂಧನ ಮಾಡಲಾಗಿತ್ತು. ಬಂಧಿತ ಪ್ರಸಾದ್ ಅತ್ತಾವರ ಮೊಬೈಲ್‌ಫೋನ್ ಪರಿಶೀಲನೆ ಮಾಡಿದ್ದೆವು. ಮೊಬೈಲ್ ವಿಡಿಯೋದಲ್ಲಿ ದೇವಸ್ಥಾನದಲ್ಲಿ ಬಲಿ‌ಕೊಡುವ ದೃಶ್ಯ ಇತ್ತು. ಸ್ನೇಹಮಯಿ ಕೃಷ್ಣ, ಗಂಗರಾಜು ಬಲ ತುಂಬುವುದಕ್ಕೆ ಈ ರೀತಿ ಮಾಡುತ್ತಿದ್ದರು‌. 5 ಕುರಿಗಳನ್ನು ಬಲಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇವತೆ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತ ಸ್ನೇಹಮಯಿ ಫೋಟೋಗೆ ಅರ್ಪಣೆ

ಎಲ್ಲಿ ಆಗಿದ್ದೆಂದು ಸ್ಪಷ್ಟತೆ ಇಲ್ಲ, ಅನಂತ್ ಭಟ್ ಯಾರೆಂದು ತನಿಖೆ ಮಾಡ್ತಿದ್ದೇವೆ. ಪ್ರಸಾದ್ ಅತ್ತಾವರ ಮೊಬೈಲ್‌ ವಾಟ್ಸಾಪ್‌ನಲ್ಲಿ ಈ ವಿಡಿಯೋ ಇತ್ತು. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಯಿ, ಗಂಗರಾಜುಗಾಗಿ ಮಾಡಲಾಗಿದೆ. ನಿನ್ನೆ ರಾತ್ರಿ ಸ್ವಯಂಪ್ರೇರಿತ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಪ್ರಾಣಿಬಲಿ ಪದ್ಧತಿ ನಿಷೇಧ ಇದೆ, ಹಣದ ಬ್ಯಾಗ್‌ನ ಫೋಟೋ ಸಹ ಇತ್ತು. ಅನಂತ್ ಭಟ್‌ಗಾಗಿ ಹುಡುಕಾಟ ನಡೆಯುತ್ತಿದೆ, ತನಿಖೆಯಲ್ಲಿ ಎಲ್ಲಾ ಗೊತ್ತಾಗುತ್ತೆ. ವಾಟ್ಸಾಪ್‌ನಲ್ಲಿ ವಿಡಿಯೋ ಚಾಟ್‌ ಸಿಕ್ಕಿದೆ, ವಿಡಿಯೋ ಡಿಲೀಟ್‌ ಆಗಿರಲಿಲ್ಲ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ಹೇಳಿದ್ದೇನು?

ಇಷ್ಟೆಲ್ಲ ಬೆಳವಣಿಗೆ ಮಧ್ಯೆ ಮೈಸೂರಿನಲ್ಲಿ ಮಾತನಾಡಿದ್ದ ಸ್ನೇಹಮಯಿ ಕೃಷ್ಣ, ನನ್ನ ವಶಪಡಿಸಿಕೊಳ್ಳಲು ಈ ರೀತಿ ಮಾಡಿರಬಹುದು ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us