ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೊಂದು ವಿವಾದ: ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ, NSUI ವಿರೋಧ

ಹಿಜಾಬ್ ವಿವಾದ ಭುಗಿಲೆದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದ್ದು, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್​ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೊಂದು ವಿವಾದ: ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ, NSUI ವಿರೋಧ
ಮಂಗಳೂರು ವಿವಿ ಕಾಲೇಜು, ಶ್ರೀಕಾಂತ್ ಶೆಟ್ಟಿ ಕಾರ್ಕಳ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 22, 2023 | 8:44 PM

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು (mangalore university college) ವಿವಾದಗಳಿಂದಲೇ ಹೆಚ್ಚು ಗಮನ ಸೆಳೆದಿರುವಂತಹದು. ಹಿಜಾಬ್ ವಿವಾದ ಭುಗಿಲೆದ್ದು ತಣ್ಣಗಾದ ಪರಿಸ್ಥಿತಿಯಲ್ಲಿ ಮತ್ತೊಂದು ವಿವಾದಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಗುರಿಯಾಗಿದೆ. ನಾಳೆ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ನಾಳೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎನ್ಎಸ್​ಯುಐ ತೀವ್ರ ವಿರೋಧ

ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಎನ್ಎಸ್​ಯುಐ ಮತ್ತು ಎಬಿವಿಪಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾದ ವಿವಾದ 

ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ  ಎಂಬ ಆರೋಪ ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಸದ್ಯ ಈ ವಿವಾದ ಎನ್ಎಸ್​ಯುಐ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Shakti Scheme: ಶ್ರೀ ಧರ್ಮಸ್ಥಳ, ಕುಕ್ಕೆಗೆ ಹರಿದು ಬರುತ್ತಿರುವ ಮಹಿಳಾ ಭಕ್ತರ ದಂಡು

ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್​ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಲಾಗಿದೆ. ಆ ಮೂಲಕ ಮಂಗಳೂರು ವಿವಿ ಕಾಲೇಜು ಮತ್ತೆ ವಿವಾದದ ಗೂಡಾಗಿದೆ. ಈ ಹಿಂದೆ ಹಿಜಾಬ್ ವಿವಾದ, ಸಾವರ್ಕರ್ ಭಾವಚಿತ್ರ ಹಾಗೂ ಭಗವಾಧ್ವಜ ಹಿಡಿದ ಭಾರತ್ ಮಾತೆ ಕಾರಣದಿಂದ ವಿವಾದಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್